ಯೆಹೋಶುವ 21 : 1 (IRVKN)
{ಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು} [PS] ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
ಯೆಹೋಶುವ 21 : 2 (IRVKN)
“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು
ಯೆಹೋಶುವ 21 : 3 (IRVKN)
ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು. [PE][PS]
ಯೆಹೋಶುವ 21 : 4 (IRVKN)
ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.
ಯೆಹೋಶುವ 21 : 5 (IRVKN)
ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
ಯೆಹೋಶುವ 21 : 6 (IRVKN)
ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
ಯೆಹೋಶುವ 21 : 7 (IRVKN)
ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು
ಯೆಹೋಶುವ 21 : 8 (IRVKN)
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. [PE][PS]
ಯೆಹೋಶುವ 21 : 9 (IRVKN)
ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.
ಯೆಹೋಶುವ 21 : 10 (IRVKN)
ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
ಯೆಹೋಶುವ 21 : 11 (IRVKN)
ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.
ಯೆಹೋಶುವ 21 : 12 (IRVKN)
ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
ಯೆಹೋಶುವ 21 : 13 (IRVKN)
ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
ಯೆಹೋಶುವ 21 : 14 (IRVKN)
ಯತ್ತೀರ್, ಎಷ್ಟೆಮೋಹ,
ಯೆಹೋಶುವ 21 : 15 (IRVKN)
ಹೋಲೋನ್, ದೆಬೀರ್,
ಯೆಹೋಶುವ 21 : 16 (IRVKN)
ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
ಯೆಹೋಶುವ 21 : 17 (IRVKN)
ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,
ಯೆಹೋಶುವ 21 : 18 (IRVKN)
ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
ಯೆಹೋಶುವ 21 : 19 (IRVKN)
ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. [PE][PS]
ಯೆಹೋಶುವ 21 : 20 (IRVKN)
ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
ಯೆಹೋಶುವ 21 : 21 (IRVKN)
ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,
ಯೆಹೋಶುವ 21 : 22 (IRVKN)
ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
ಯೆಹೋಶುವ 21 : 23 (IRVKN)
ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,
ಯೆಹೋಶುವ 21 : 24 (IRVKN)
ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
ಯೆಹೋಶುವ 21 : 25 (IRVKN)
ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
ಯೆಹೋಶುವ 21 : 26 (IRVKN)
ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು. [PE][PS]
ಯೆಹೋಶುವ 21 : 27 (IRVKN)
ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
ಯೆಹೋಶುವ 21 : 28 (IRVKN)
ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
ಯೆಹೋಶುವ 21 : 29 (IRVKN)
ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
ಯೆಹೋಶುವ 21 : 30 (IRVKN)
ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
ಯೆಹೋಶುವ 21 : 31 (IRVKN)
ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
ಯೆಹೋಶುವ 21 : 32 (IRVKN)
ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
ಯೆಹೋಶುವ 21 : 33 (IRVKN)
ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
ಯೆಹೋಶುವ 21 : 34 (IRVKN)
ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,
ಯೆಹೋಶುವ 21 : 35 (IRVKN)
ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.
ಯೆಹೋಶುವ 21 : 36 (IRVKN)
ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,
ಯೆಹೋಶುವ 21 : 37 (IRVKN)
ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
ಯೆಹೋಶುವ 21 : 38 (IRVKN)
ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
ಯೆಹೋಶುವ 21 : 39 (IRVKN)
ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.
ಯೆಹೋಶುವ 21 : 40 (IRVKN)
ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.
ಯೆಹೋಶುವ 21 : 41 (IRVKN)
ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
ಯೆಹೋಶುವ 21 : 42 (IRVKN)
ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು. [PE][PS]
ಯೆಹೋಶುವ 21 : 43 (IRVKN)
ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
ಯೆಹೋಶುವ 21 : 44 (IRVKN)
ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.
ಯೆಹೋಶುವ 21 : 45 (IRVKN)
ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45

BG:

Opacity:

Color:


Size:


Font: