ಯೆಹೋಶುವ 23 : 1 (IRVKN)
{ಯೆಹೋಶುವನ ಬೀಳ್ಕೊಡುಗೆಯ ಪ್ರಬೋಧನೆ} [PS] ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.
ಯೆಹೋಶುವ 23 : 2 (IRVKN)
ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.
ಯೆಹೋಶುವ 23 : 3 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.
ಯೆಹೋಶುವ 23 : 4 (IRVKN)
ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.
ಯೆಹೋಶುವ 23 : 5 (IRVKN)
ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.
ಯೆಹೋಶುವ 23 : 6 (IRVKN)
ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.
ಯೆಹೋಶುವ 23 : 7 (IRVKN)
ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.
ಯೆಹೋಶುವ 23 : 8 (IRVKN)
ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.
ಯೆಹೋಶುವ 23 : 9 (IRVKN)
ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
ಯೆಹೋಶುವ 23 : 10 (IRVKN)
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
ಯೆಹೋಶುವ 23 : 11 (IRVKN)
ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.
ಯೆಹೋಶುವ 23 : 12 (IRVKN)
ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,
ಯೆಹೋಶುವ 23 : 13 (IRVKN)
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.
ಯೆಹೋಶುವ 23 : 14 (IRVKN)
ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
ಯೆಹೋಶುವ 23 : 15 (IRVKN)
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.
ಯೆಹೋಶುವ 23 : 16 (IRVKN)
ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು. [PE]

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: