ಯೆಹೋಶುವ 3 : 1 (IRVKN)
ಯೊರ್ದನ್ ನದಿಯನ್ನು ದಾಟಿದ್ದು ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
ಯೆಹೋಶುವ 3 : 2 (IRVKN)
ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
ಯೆಹೋಶುವ 3 : 3 (IRVKN)
“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
ಯೆಹೋಶುವ 3 : 4 (IRVKN)
ಆದರೆ ನಿಮಗೂ ಮಂಜೂಷಕ್ಕೂ ಸುಮಾರು * ಸುಮಾರು ಒಂದು ಕಿಲೋ ಮೀಟರ್. ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
ಯೆಹೋಶುವ 3 : 5 (IRVKN)
ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
ಯೆಹೋಶುವ 3 : 6 (IRVKN)
ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
ಯೆಹೋಶುವ 3 : 7 (IRVKN)
ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
ಯೆಹೋಶುವ 3 : 8 (IRVKN)
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
ಯೆಹೋಶುವ 3 : 9 (IRVKN)
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
ಯೆಹೋಶುವ 3 : 10 (IRVKN)
“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
ಯೆಹೋಶುವ 3 : 11 (IRVKN)
ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
ಯೆಹೋಶುವ 3 : 12 (IRVKN)
ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
ಯೆಹೋಶುವ 3 : 13 (IRVKN)
ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
ಯೆಹೋಶುವ 3 : 14 (IRVKN)
ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
ಯೆಹೋಶುವ 3 : 15 (IRVKN)
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
ಯೆಹೋಶುವ 3 : 16 (IRVKN)
ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
ಯೆಹೋಶುವ 3 : 17 (IRVKN)
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

1 2 3 4 5 6 7 8 9 10 11 12 13 14 15 16 17