ಯೆಹೋಶುವ 4 : 1 (IRVKN)
ಗಿಲ್ಗಾಲಿನಲ್ಲಿ ಹನ್ನೆರಡು ಸ್ಮಾರಕ ಕಲ್ಲುಗಳನ್ನು ನಿಲ್ಲಿಸಿದ್ದು ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ
ಯೆಹೋಶುವ 4 : 2 (IRVKN)
“ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು
ಯೆಹೋಶುವ 4 : 3 (IRVKN)
ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.
ಯೆಹೋಶುವ 4 : 4 (IRVKN)
ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ
ಯೆಹೋಶುವ 4 : 5 (IRVKN)
“ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
ಯೆಹೋಶುವ 4 : 6 (IRVKN)
ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ
ಯೆಹೋಶುವ 4 : 7 (IRVKN)
ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
ಯೆಹೋಶುವ 4 : 8 (IRVKN)
ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
ಯೆಹೋಶುವ 4 : 9 (IRVKN)
ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.
ಯೆಹೋಶುವ 4 : 10 (IRVKN)
ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.
ಯೆಹೋಶುವ 4 : 11 (IRVKN)
ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.
ಯೆಹೋಶುವ 4 : 12 (IRVKN)
ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.
ಯೆಹೋಶುವ 4 : 13 (IRVKN)
ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:
ಯೆಹೋಶುವ 4 : 14 (IRVKN)
ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.
ಯೆಹೋಶುವ 4 : 15 (IRVKN)
(15-16)ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು.
ಯೆಹೋಶುವ 4 : 16 (IRVKN)
ಯೆಹೋಶುವ 4 : 17 (IRVKN)
ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.
ಯೆಹೋಶುವ 4 : 18 (IRVKN)
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.
ಯೆಹೋಶುವ 4 : 19 (IRVKN)
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
ಯೆಹೋಶುವ 4 : 20 (IRVKN)
ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.
ಯೆಹೋಶುವ 4 : 21 (IRVKN)
ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ
ಯೆಹೋಶುವ 4 : 22 (IRVKN)
‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.
ಯೆಹೋಶುವ 4 : 23 (IRVKN)
ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.
ಯೆಹೋಶುವ 4 : 24 (IRVKN)
ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24