ಯೆಹೋಶುವ 5 : 1 (IRVKN)
ಗಿಲ್ಗಾಲಿನಲ್ಲಿ ಇಸ್ರಾಯೇಲ್ಯರಿಗೆ ಮಾಡಲಾದ ಸುನ್ನತಿ ಸಂಸ್ಕಾರ ಹಾಗೂ ಪಸ್ಕಹಬ್ಬ ಆಚರಿಸಿದ್ದು
ಯೆಹೋಶುವ 5 : 2 (IRVKN)
ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು. ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು
ಯೆಹೋಶುವ 5 : 3 (IRVKN)
ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು * ಇಬ್ರಿಯ ಭಾಷೆಯಲ್ಲಿ ಗಿಬಿಯಾತ್ ಹಾರಲೋತ್. ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.
ಯೆಹೋಶುವ 5 : 4 (IRVKN)
ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.
ಯೆಹೋಶುವ 5 : 5 (IRVKN)
ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.
ಯೆಹೋಶುವ 5 : 6 (IRVKN)
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ [† ವಿಮೋ 3: 8 ]ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಯೆಹೋಶುವ 5 : 7 (IRVKN)
ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.
ಯೆಹೋಶುವ 5 : 8 (IRVKN)
ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.
ಯೆಹೋಶುವ 5 : 9 (IRVKN)
ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‡ ಗಿಲ್ಗಾಲ್ ಎಂದರೆ ಉರುಳಿ ಹೋಗುವುದು. ಗಿಲ್ಗಾಲ್ ಎಂಬ ಹೆಸರಿರುತ್ತದೆ.
ಯೆಹೋಶುವ 5 : 10 (IRVKN)
ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.
ಯೆಹೋಶುವ 5 : 11 (IRVKN)
ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.
ಯೆಹೋಶುವ 5 : 12 (IRVKN)
ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.
ಯೆಹೋಶುವ 5 : 13 (IRVKN)
ಯೆಹೋವನ ಸೇನಾಧಿಪತಿ ಯೆಹೋಶುವನಿಗೆ ಪ್ರತ್ಯಕ್ಷವಾದದ್ದು ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು [§ ಆದಿ 18:2; ವಿಮೋ 23:20, 23 ]ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
ಯೆಹೋಶುವ 5 : 14 (IRVKN)
ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು
ಯೆಹೋಶುವ 5 : 15 (IRVKN)
ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.
❮
❯
1
2
3
4
5
6
7
8
9
10
11
12
13
14
15