ನ್ಯಾಯಸ್ಥಾಪಕರು 11 : 1 (IRVKN)
ಗಿಲ್ಯಾದಿನವರ ನಾಯಕನಾದ ಯೆಫ್ತಾಹ ಗಿಲ್ಯಾದ್ಯನಾದ [* ಇಬ್ರಿ 11: 32 ]ಯೆಪ್ತಾಹನು † 2 ಅರಸು. 5: 1. ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
ನ್ಯಾಯಸ್ಥಾಪಕರು 11 : 2 (IRVKN)
ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ನ್ಯಾಯಸ್ಥಾಪಕರು 11 : 3 (IRVKN)
ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
ನ್ಯಾಯಸ್ಥಾಪಕರು 11 : 4 (IRVKN)
ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
ನ್ಯಾಯಸ್ಥಾಪಕರು 11 : 5 (IRVKN)
ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.
ನ್ಯಾಯಸ್ಥಾಪಕರು 11 : 6 (IRVKN)
ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.
ನ್ಯಾಯಸ್ಥಾಪಕರು 11 : 7 (IRVKN)
ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
ನ್ಯಾಯಸ್ಥಾಪಕರು 11 : 8 (IRVKN)
ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
ನ್ಯಾಯಸ್ಥಾಪಕರು 11 : 9 (IRVKN)
ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
ನ್ಯಾಯಸ್ಥಾಪಕರು 11 : 10 (IRVKN)
ಅವರು ಅವನಿಗೆ, “ಹಾಗೆಯೇ ಮಾಡುವೆವು; [‡ ಯೆರೆ 42: 5 ]ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
ನ್ಯಾಯಸ್ಥಾಪಕರು 11 : 11 (IRVKN)
ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
ನ್ಯಾಯಸ್ಥಾಪಕರು 11 : 12 (IRVKN)
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
ನ್ಯಾಯಸ್ಥಾಪಕರು 11 : 13 (IRVKN)
ಆ ಅರಸನು ದೂತರಿಗೆ, “[§ ಅರಣ್ಯ 21: 24 ]ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.
ನ್ಯಾಯಸ್ಥಾಪಕರು 11 : 14 (IRVKN)
ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
ನ್ಯಾಯಸ್ಥಾಪಕರು 11 : 15 (IRVKN)
“ಯೆಪ್ತಾಹನಾದ ನನ್ನ ಮಾತನ್ನು ಕೇಳು; [* ಧರ್ಮೋ 2:9, 19 ]ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
ನ್ಯಾಯಸ್ಥಾಪಕರು 11 : 16 (IRVKN)
ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
ನ್ಯಾಯಸ್ಥಾಪಕರು 11 : 17 (IRVKN)
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
ನ್ಯಾಯಸ್ಥಾಪಕರು 11 : 18 (IRVKN)
ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
ನ್ಯಾಯಸ್ಥಾಪಕರು 11 : 19 (IRVKN)
ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
ನ್ಯಾಯಸ್ಥಾಪಕರು 11 : 20 (IRVKN)
ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
ನ್ಯಾಯಸ್ಥಾಪಕರು 11 : 21 (IRVKN)
ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
ನ್ಯಾಯಸ್ಥಾಪಕರು 11 : 22 (IRVKN)
ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
ನ್ಯಾಯಸ್ಥಾಪಕರು 11 : 23 (IRVKN)
ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
ನ್ಯಾಯಸ್ಥಾಪಕರು 11 : 24 (IRVKN)
ನಿನ್ನ ದೇವನಾದ [† 1 ಅರಸು. 11: 7 ]ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
ನ್ಯಾಯಸ್ಥಾಪಕರು 11 : 25 (IRVKN)
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ [‡ ಅರಣ್ಯ 22: 24 ]ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
ನ್ಯಾಯಸ್ಥಾಪಕರು 11 : 26 (IRVKN)
ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
ನ್ಯಾಯಸ್ಥಾಪಕರು 11 : 27 (IRVKN)
ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.
ನ್ಯಾಯಸ್ಥಾಪಕರು 11 : 28 (IRVKN)
ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
ನ್ಯಾಯಸ್ಥಾಪಕರು 11 : 29 (IRVKN)
ಯೆಪ್ತಾಹನು ಅಮ್ಮೋನಿಯರನ್ನು ಸೋಲಿಸಿದ್ದು ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
ನ್ಯಾಯಸ್ಥಾಪಕರು 11 : 30 (IRVKN)
[§ ಆದಿ 28:20- 22 ]ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
ನ್ಯಾಯಸ್ಥಾಪಕರು 11 : 31 (IRVKN)
ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು [* ಯಾಜಕ. 27: 2 ]ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
ನ್ಯಾಯಸ್ಥಾಪಕರು 11 : 32 (IRVKN)
ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
ನ್ಯಾಯಸ್ಥಾಪಕರು 11 : 33 (IRVKN)
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.
ನ್ಯಾಯಸ್ಥಾಪಕರು 11 : 34 (IRVKN)
ಯೆಪ್ತಾಹನು ಮಗಳು ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು [† ವಿಮೋ 15: 20 ]ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
ನ್ಯಾಯಸ್ಥಾಪಕರು 11 : 35 (IRVKN)
ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ [‡ ಅರಣ್ಯ 30: 2 ]ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
ನ್ಯಾಯಸ್ಥಾಪಕರು 11 : 36 (IRVKN)
ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
ನ್ಯಾಯಸ್ಥಾಪಕರು 11 : 37 (IRVKN)
ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
ನ್ಯಾಯಸ್ಥಾಪಕರು 11 : 38 (IRVKN)
ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
ನ್ಯಾಯಸ್ಥಾಪಕರು 11 : 39 (IRVKN)
ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ § ಆಕೆಯು ಸಾಯುವ ತನಕ ಕನ್ಯೆಯಾಗಿ ಯೆಹೋವನಿಗೋಸ್ಕರ ಜೀವಿಸಿದಳು. ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
ನ್ಯಾಯಸ್ಥಾಪಕರು 11 : 40 (IRVKN)
ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
❮
❯