ನ್ಯಾಯಸ್ಥಾಪಕರು 12 : 1 (IRVKN)
ಯೆಪ್ತಾಹನು ಎಫ್ರಾಯೀಮ್ಯರನ್ನು ಸೋಲಿಸಿದ್ದು ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.
ನ್ಯಾಯಸ್ಥಾಪಕರು 12 : 2 (IRVKN)
ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
ನ್ಯಾಯಸ್ಥಾಪಕರು 12 : 3 (IRVKN)
ನೀವು ಸಹಾಯಮಾಡುವುದಿಲ್ಲವೆಂದು ತಿಳಿದು [* 1 ಸಮು 19: 5 ]ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,
ನ್ಯಾಯಸ್ಥಾಪಕರು 12 : 4 (IRVKN)
ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.
ನ್ಯಾಯಸ್ಥಾಪಕರು 12 : 5 (IRVKN)
ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ [† ನ್ಯಾಯ 3: 31 ]ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.
ನ್ಯಾಯಸ್ಥಾಪಕರು 12 : 6 (IRVKN)
ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.
ನ್ಯಾಯಸ್ಥಾಪಕರು 12 : 7 (IRVKN)
ನ್ಯಾಯಸ್ಥಾಪಕರು 12 : 8 (IRVKN)
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು. ಇಬ್ಚಾನ್ ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.
ನ್ಯಾಯಸ್ಥಾಪಕರು 12 : 9 (IRVKN)
ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.
ನ್ಯಾಯಸ್ಥಾಪಕರು 12 : 10 (IRVKN)
ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು.
ನ್ಯಾಯಸ್ಥಾಪಕರು 12 : 11 (IRVKN)
ಏಲೋನ್ ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.
ನ್ಯಾಯಸ್ಥಾಪಕರು 12 : 12 (IRVKN)
ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.
ನ್ಯಾಯಸ್ಥಾಪಕರು 12 : 13 (IRVKN)
ಅಬ್ದೋನ್ ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು.
ನ್ಯಾಯಸ್ಥಾಪಕರು 12 : 14 (IRVKN)
ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;
ನ್ಯಾಯಸ್ಥಾಪಕರು 12 : 15 (IRVKN)
ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.
❮
❯
1
2
3
4
5
6
7
8
9
10
11
12
13
14
15