ನ್ಯಾಯಸ್ಥಾಪಕರು 15 : 1 (IRVKN)
{ಸಂಸೋನನು ಫಿಲಿಷ್ಟಿಯರ ಬೆಳೆಯನ್ನು ಹಾಳುಮಾಡಿದ್ದು} [PS] ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;
ನ್ಯಾಯಸ್ಥಾಪಕರು 15 : 2 (IRVKN)
ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.
ನ್ಯಾಯಸ್ಥಾಪಕರು 15 : 3 (IRVKN)
ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ
ನ್ಯಾಯಸ್ಥಾಪಕರು 15 : 4 (IRVKN)
ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,
ನ್ಯಾಯಸ್ಥಾಪಕರು 15 : 5 (IRVKN)
ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.
ನ್ಯಾಯಸ್ಥಾಪಕರು 15 : 6 (IRVKN)
ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
ನ್ಯಾಯಸ್ಥಾಪಕರು 15 : 7 (IRVKN)
ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ
ನ್ಯಾಯಸ್ಥಾಪಕರು 15 : 8 (IRVKN)
ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು. [PS]
ನ್ಯಾಯಸ್ಥಾಪಕರು 15 : 9 (IRVKN)
{ಸಂಸೋನನು ಲೇಹಿಯಲ್ಲಿ ಸಾವಿರ ಮಂದಿ ಫಿಲಿಷ್ಟಿಯರನ್ನು ಹೊಡೆದು ಸೋಲಿಸಿದ್ದು} [PS] ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.
ನ್ಯಾಯಸ್ಥಾಪಕರು 15 : 10 (IRVKN)
ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು.
ನ್ಯಾಯಸ್ಥಾಪಕರು 15 : 11 (IRVKN)
ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
ನ್ಯಾಯಸ್ಥಾಪಕರು 15 : 12 (IRVKN)
ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
ನ್ಯಾಯಸ್ಥಾಪಕರು 15 : 13 (IRVKN)
ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು. [PE][PS]
ನ್ಯಾಯಸ್ಥಾಪಕರು 15 : 14 (IRVKN)
ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. [* 1 ಸಮು 11:6.] ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
ನ್ಯಾಯಸ್ಥಾಪಕರು 15 : 15 (IRVKN)
ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ [† ಯೆಹೋ. 23:10.] ಸಾವಿರ ಜನರನ್ನು ಸಂಹರಿಸಿಬಿಟ್ಟು, [QBR3]
ನ್ಯಾಯಸ್ಥಾಪಕರು 15 : 16 (IRVKN)
“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ, [PE][PS]
ನ್ಯಾಯಸ್ಥಾಪಕರು 15 : 17 (IRVKN)
ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ [‡ ದವಡೆಯ ಗುಡ್ಡ ಎಂದು ಅರ್ಥ.] ರಾಮತ್ ಲೆಹೀ ಎಂದು ಹೆಸರಾಯಿತು.
ನ್ಯಾಯಸ್ಥಾಪಕರು 15 : 18 (IRVKN)
ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು
ನ್ಯಾಯಸ್ಥಾಪಕರು 15 : 19 (IRVKN)
ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ [§ ಮೊರೆಯಿಡುವವನ ಬುಗ್ಗೆ ಎಂದು ಅರ್ಥ. ] ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
ನ್ಯಾಯಸ್ಥಾಪಕರು 15 : 20 (IRVKN)
ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: