ನ್ಯಾಯಸ್ಥಾಪಕರು 16 : 1 (IRVKN)
ಸಂಸೋನನ ಪರಾಕ್ರಮ ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
ನ್ಯಾಯಸ್ಥಾಪಕರು 16 : 2 (IRVKN)
ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು [* ಕೀರ್ತ 118:10-12: ಅ.ಕೃ. 9: 24 ]ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.
ನ್ಯಾಯಸ್ಥಾಪಕರು 16 : 3 (IRVKN)
ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
ನ್ಯಾಯಸ್ಥಾಪಕರು 16 : 4 (IRVKN)
ಸಂಸೋನನು ದೆಲೀಲಳಿಂದ ನಾಶವಾದದ್ದು ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
ನ್ಯಾಯಸ್ಥಾಪಕರು 16 : 5 (IRVKN)
ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ † ಸುಮಾರು 60 ಕಿಲೋಗ್ರಾಂ. ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
ನ್ಯಾಯಸ್ಥಾಪಕರು 16 : 6 (IRVKN)
ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
ನ್ಯಾಯಸ್ಥಾಪಕರು 16 : 7 (IRVKN)
ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
ನ್ಯಾಯಸ್ಥಾಪಕರು 16 : 8 (IRVKN)
ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
ನ್ಯಾಯಸ್ಥಾಪಕರು 16 : 9 (IRVKN)
ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.
ನ್ಯಾಯಸ್ಥಾಪಕರು 16 : 10 (IRVKN)
ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
ನ್ಯಾಯಸ್ಥಾಪಕರು 16 : 11 (IRVKN)
ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.
ನ್ಯಾಯಸ್ಥಾಪಕರು 16 : 12 (IRVKN)
ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
ನ್ಯಾಯಸ್ಥಾಪಕರು 16 : 13 (IRVKN)
ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
ನ್ಯಾಯಸ್ಥಾಪಕರು 16 : 14 (IRVKN)
ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
ನ್ಯಾಯಸ್ಥಾಪಕರು 16 : 15 (IRVKN)
ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
ನ್ಯಾಯಸ್ಥಾಪಕರು 16 : 16 (IRVKN)
ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
ನ್ಯಾಯಸ್ಥಾಪಕರು 16 : 17 (IRVKN)
ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
ನ್ಯಾಯಸ್ಥಾಪಕರು 16 : 18 (IRVKN)
ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
ನ್ಯಾಯಸ್ಥಾಪಕರು 16 : 19 (IRVKN)
ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
ನ್ಯಾಯಸ್ಥಾಪಕರು 16 : 20 (IRVKN)
ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; [‡ 1 ಸಮು 28:15, 16 ]ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
ನ್ಯಾಯಸ್ಥಾಪಕರು 16 : 21 (IRVKN)
ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
ನ್ಯಾಯಸ್ಥಾಪಕರು 16 : 22 (IRVKN)
ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.
ನ್ಯಾಯಸ್ಥಾಪಕರು 16 : 23 (IRVKN)
ಸಂಸೋನನ ಮರಣ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ [§ 1 ಸಮು 5:2- 7 ]ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
ನ್ಯಾಯಸ್ಥಾಪಕರು 16 : 24 (IRVKN)
ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.
ನ್ಯಾಯಸ್ಥಾಪಕರು 16 : 25 (IRVKN)
ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
ನ್ಯಾಯಸ್ಥಾಪಕರು 16 : 26 (IRVKN)
ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
ನ್ಯಾಯಸ್ಥಾಪಕರು 16 : 27 (IRVKN)
ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
ನ್ಯಾಯಸ್ಥಾಪಕರು 16 : 28 (IRVKN)
ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
ನ್ಯಾಯಸ್ಥಾಪಕರು 16 : 29 (IRVKN)
ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
ನ್ಯಾಯಸ್ಥಾಪಕರು 16 : 30 (IRVKN)
“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
ನ್ಯಾಯಸ್ಥಾಪಕರು 16 : 31 (IRVKN)
ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.
❮
❯