ನ್ಯಾಯಸ್ಥಾಪಕರು 19 : 1 (IRVKN)
ಗಿಬೆಯದವರ ಕ್ರೂರಕೃತ್ಯ ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.
ನ್ಯಾಯಸ್ಥಾಪಕರು 19 : 2 (IRVKN)
ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
ನ್ಯಾಯಸ್ಥಾಪಕರು 19 : 3 (IRVKN)
ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
ನ್ಯಾಯಸ್ಥಾಪಕರು 19 : 4 (IRVKN)
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
ನ್ಯಾಯಸ್ಥಾಪಕರು 19 : 5 (IRVKN)
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು
ನ್ಯಾಯಸ್ಥಾಪಕರು 19 : 6 (IRVKN)
ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;
ನ್ಯಾಯಸ್ಥಾಪಕರು 19 : 7 (IRVKN)
ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.
ನ್ಯಾಯಸ್ಥಾಪಕರು 19 : 8 (IRVKN)
ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.
ನ್ಯಾಯಸ್ಥಾಪಕರು 19 : 9 (IRVKN)
ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.
ನ್ಯಾಯಸ್ಥಾಪಕರು 19 : 10 (IRVKN)
ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.
ನ್ಯಾಯಸ್ಥಾಪಕರು 19 : 11 (IRVKN)
ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
ನ್ಯಾಯಸ್ಥಾಪಕರು 19 : 12 (IRVKN)
ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.
ನ್ಯಾಯಸ್ಥಾಪಕರು 19 : 13 (IRVKN)
ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
ನ್ಯಾಯಸ್ಥಾಪಕರು 19 : 14 (IRVKN)
ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.
ನ್ಯಾಯಸ್ಥಾಪಕರು 19 : 15 (IRVKN)
ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
ನ್ಯಾಯಸ್ಥಾಪಕರು 19 : 16 (IRVKN)
ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
ನ್ಯಾಯಸ್ಥಾಪಕರು 19 : 17 (IRVKN)
ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
ನ್ಯಾಯಸ್ಥಾಪಕರು 19 : 18 (IRVKN)
ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.
ನ್ಯಾಯಸ್ಥಾಪಕರು 19 : 19 (IRVKN)
ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
ನ್ಯಾಯಸ್ಥಾಪಕರು 19 : 20 (IRVKN)
ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
ನ್ಯಾಯಸ್ಥಾಪಕರು 19 : 21 (IRVKN)
ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
ನ್ಯಾಯಸ್ಥಾಪಕರು 19 : 22 (IRVKN)
ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.
ನ್ಯಾಯಸ್ಥಾಪಕರು 19 : 23 (IRVKN)
ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
ನ್ಯಾಯಸ್ಥಾಪಕರು 19 : 24 (IRVKN)
ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.
ನ್ಯಾಯಸ್ಥಾಪಕರು 19 : 25 (IRVKN)
ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.
ನ್ಯಾಯಸ್ಥಾಪಕರು 19 : 26 (IRVKN)
ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.
ನ್ಯಾಯಸ್ಥಾಪಕರು 19 : 27 (IRVKN)
ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.
ನ್ಯಾಯಸ್ಥಾಪಕರು 19 : 28 (IRVKN)
ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.
ನ್ಯಾಯಸ್ಥಾಪಕರು 19 : 29 (IRVKN)
ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
ನ್ಯಾಯಸ್ಥಾಪಕರು 19 : 30 (IRVKN)
ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30