ನ್ಯಾಯಸ್ಥಾಪಕರು 2 : 1 (IRVKN)
ಬೋಕೀಮಿನಲ್ಲಿ ದೇವದೂತನು ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
ನ್ಯಾಯಸ್ಥಾಪಕರು 2 : 2 (IRVKN)
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
ನ್ಯಾಯಸ್ಥಾಪಕರು 2 : 3 (IRVKN)
‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
ನ್ಯಾಯಸ್ಥಾಪಕರು 2 : 4 (IRVKN)
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
ನ್ಯಾಯಸ್ಥಾಪಕರು 2 : 5 (IRVKN)
ಮತ್ತು ಆ ಸ್ಥಳಕ್ಕೆ * ಅಳುವವರು. ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
ನ್ಯಾಯಸ್ಥಾಪಕರು 2 : 6 (IRVKN)
ಯೆಹೋಶುವನ ಮರಣ ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
ನ್ಯಾಯಸ್ಥಾಪಕರು 2 : 7 (IRVKN)
ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
ನ್ಯಾಯಸ್ಥಾಪಕರು 2 : 8 (IRVKN)
ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.
ನ್ಯಾಯಸ್ಥಾಪಕರು 2 : 9 (IRVKN)
ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
ನ್ಯಾಯಸ್ಥಾಪಕರು 2 : 10 (IRVKN)
ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
ನ್ಯಾಯಸ್ಥಾಪಕರು 2 : 11 (IRVKN)
ಇಸ್ರಾಯೇಲ್ಯರು ದ್ರೋಹಿಗಳಾದ್ದದು ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
ನ್ಯಾಯಸ್ಥಾಪಕರು 2 : 12 (IRVKN)
ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
ನ್ಯಾಯಸ್ಥಾಪಕರು 2 : 13 (IRVKN)
ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.
ನ್ಯಾಯಸ್ಥಾಪಕರು 2 : 14 (IRVKN)
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
ನ್ಯಾಯಸ್ಥಾಪಕರು 2 : 15 (IRVKN)
ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
ನ್ಯಾಯಸ್ಥಾಪಕರು 2 : 16 (IRVKN)
ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
ನ್ಯಾಯಸ್ಥಾಪಕರು 2 : 17 (IRVKN)
ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.
ನ್ಯಾಯಸ್ಥಾಪಕರು 2 : 18 (IRVKN)
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ನ್ಯಾಯಸ್ಥಾಪಕರು 2 : 19 (IRVKN)
ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
ನ್ಯಾಯಸ್ಥಾಪಕರು 2 : 20 (IRVKN)
ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
ನ್ಯಾಯಸ್ಥಾಪಕರು 2 : 21 (IRVKN)
ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
ನ್ಯಾಯಸ್ಥಾಪಕರು 2 : 22 (IRVKN)
ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
ನ್ಯಾಯಸ್ಥಾಪಕರು 2 : 23 (IRVKN)
ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23