ನ್ಯಾಯಸ್ಥಾಪಕರು 5 : 1 (IRVKN)
ದೆಬೋರಳ ಜಯಗೀತೆ
ನ್ಯಾಯಸ್ಥಾಪಕರು 5 : 2 (IRVKN)
ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು: * ಅಥವಾ ಯೆಹೋವನು ಇಸ್ರಾಯೇಲರಿಗಾಗಿ ನೀತಿಯನ್ನು ಸ್ಥಾಪಿಸಿದ್ದಾನೆ. ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
ನ್ಯಾಯಸ್ಥಾಪಕರು 5 : 3 (IRVKN)
“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
ನ್ಯಾಯಸ್ಥಾಪಕರು 5 : 4 (IRVKN)
“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ [† 2 ಸಮು 22:8; ನಹೂ. 1: 5 ]ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
ನ್ಯಾಯಸ್ಥಾಪಕರು 5 : 5 (IRVKN)
ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಯೆಶಾ 64: 1 ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
ನ್ಯಾಯಸ್ಥಾಪಕರು 5 : 6 (IRVKN)
“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
ನ್ಯಾಯಸ್ಥಾಪಕರು 5 : 7 (IRVKN)
ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
ನ್ಯಾಯಸ್ಥಾಪಕರು 5 : 8 (IRVKN)
ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
ನ್ಯಾಯಸ್ಥಾಪಕರು 5 : 9 (IRVKN)
ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
ನ್ಯಾಯಸ್ಥಾಪಕರು 5 : 10 (IRVKN)
“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
ನ್ಯಾಯಸ್ಥಾಪಕರು 5 : 11 (IRVKN)
ಸೇದುವ ಬಾವಿಗಳ ಬಳಿಯಲ್ಲಿ § ಸಂಗೀತಗಾರರ. ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
ನ್ಯಾಯಸ್ಥಾಪಕರು 5 : 12 (IRVKN)
‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
ನ್ಯಾಯಸ್ಥಾಪಕರು 5 : 13 (IRVKN)
“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
ನ್ಯಾಯಸ್ಥಾಪಕರು 5 : 14 (IRVKN)
ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
ನ್ಯಾಯಸ್ಥಾಪಕರು 5 : 15 (IRVKN)
ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
ನ್ಯಾಯಸ್ಥಾಪಕರು 5 : 16 (IRVKN)
ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
ನ್ಯಾಯಸ್ಥಾಪಕರು 5 : 17 (IRVKN)
ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
ನ್ಯಾಯಸ್ಥಾಪಕರು 5 : 18 (IRVKN)
ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
ನ್ಯಾಯಸ್ಥಾಪಕರು 5 : 19 (IRVKN)
“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
ನ್ಯಾಯಸ್ಥಾಪಕರು 5 : 20 (IRVKN)
ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
ನ್ಯಾಯಸ್ಥಾಪಕರು 5 : 21 (IRVKN)
ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
ನ್ಯಾಯಸ್ಥಾಪಕರು 5 : 22 (IRVKN)
ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
ನ್ಯಾಯಸ್ಥಾಪಕರು 5 : 23 (IRVKN)
ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’
ನ್ಯಾಯಸ್ಥಾಪಕರು 5 : 24 (IRVKN)
“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
ನ್ಯಾಯಸ್ಥಾಪಕರು 5 : 25 (IRVKN)
ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
ನ್ಯಾಯಸ್ಥಾಪಕರು 5 : 26 (IRVKN)
ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
ನ್ಯಾಯಸ್ಥಾಪಕರು 5 : 27 (IRVKN)
ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
ನ್ಯಾಯಸ್ಥಾಪಕರು 5 : 28 (IRVKN)
“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
ನ್ಯಾಯಸ್ಥಾಪಕರು 5 : 29 (IRVKN)
ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
ನ್ಯಾಯಸ್ಥಾಪಕರು 5 : 30 (IRVKN)
‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, * ಕೊಳ್ಳೆಯವರ ಕಂಠ. ಕಂಠಮಾಲೆಯೂ ದೊರಕಿರುತ್ತವೆ.’
ನ್ಯಾಯಸ್ಥಾಪಕರು 5 : 31 (IRVKN)
ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31