ಪ್ರಲಾಪಗಳು 3 : 1 (IRVKN)
ಶಿಕ್ಷೆ, ಪಶ್ಚಾತ್ತಾಪ ಮತ್ತು ನಿರೀಕ್ಷೆ ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ.
ಪ್ರಲಾಪಗಳು 3 : 2 (IRVKN)
ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ.
ಪ್ರಲಾಪಗಳು 3 : 3 (IRVKN)
ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.
ಪ್ರಲಾಪಗಳು 3 : 4 (IRVKN)
ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;
ಪ್ರಲಾಪಗಳು 3 : 5 (IRVKN)
ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.
ಪ್ರಲಾಪಗಳು 3 : 6 (IRVKN)
ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.
ಪ್ರಲಾಪಗಳು 3 : 7 (IRVKN)
ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.
ಪ್ರಲಾಪಗಳು 3 : 8 (IRVKN)
ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.
ಪ್ರಲಾಪಗಳು 3 : 9 (IRVKN)
ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ.
ಪ್ರಲಾಪಗಳು 3 : 10 (IRVKN)
ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
ಪ್ರಲಾಪಗಳು 3 : 11 (IRVKN)
ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ.
ಪ್ರಲಾಪಗಳು 3 : 12 (IRVKN)
ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.
ಪ್ರಲಾಪಗಳು 3 : 13 (IRVKN)
ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.
ಪ್ರಲಾಪಗಳು 3 : 14 (IRVKN)
ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ.
ಪ್ರಲಾಪಗಳು 3 : 15 (IRVKN)
ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.
ಪ್ರಲಾಪಗಳು 3 : 16 (IRVKN)
ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.
ಪ್ರಲಾಪಗಳು 3 : 17 (IRVKN)
ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.
ಪ್ರಲಾಪಗಳು 3 : 18 (IRVKN)
“ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.
ಪ್ರಲಾಪಗಳು 3 : 19 (IRVKN)
ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.
ಪ್ರಲಾಪಗಳು 3 : 20 (IRVKN)
ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
ಪ್ರಲಾಪಗಳು 3 : 21 (IRVKN)
ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!
ಪ್ರಲಾಪಗಳು 3 : 22 (IRVKN)
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
ಪ್ರಲಾಪಗಳು 3 : 23 (IRVKN)
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
ಪ್ರಲಾಪಗಳು 3 : 24 (IRVKN)
“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
ಪ್ರಲಾಪಗಳು 3 : 25 (IRVKN)
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
ಪ್ರಲಾಪಗಳು 3 : 26 (IRVKN)
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
ಪ್ರಲಾಪಗಳು 3 : 27 (IRVKN)
ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.
ಪ್ರಲಾಪಗಳು 3 : 28 (IRVKN)
ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.
ಪ್ರಲಾಪಗಳು 3 : 29 (IRVKN)
ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.
ಪ್ರಲಾಪಗಳು 3 : 30 (IRVKN)
ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.
ಪ್ರಲಾಪಗಳು 3 : 31 (IRVKN)
ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.
ಪ್ರಲಾಪಗಳು 3 : 32 (IRVKN)
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಪ್ರಲಾಪಗಳು 3 : 33 (IRVKN)
ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.
ಪ್ರಲಾಪಗಳು 3 : 34 (IRVKN)
ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,
ಪ್ರಲಾಪಗಳು 3 : 35 (IRVKN)
ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,
ಪ್ರಲಾಪಗಳು 3 : 36 (IRVKN)
ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?
ಪ್ರಲಾಪಗಳು 3 : 37 (IRVKN)
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
ಪ್ರಲಾಪಗಳು 3 : 38 (IRVKN)
ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.
ಪ್ರಲಾಪಗಳು 3 : 39 (IRVKN)
ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?
ಪ್ರಲಾಪಗಳು 3 : 40 (IRVKN)
ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.
ಪ್ರಲಾಪಗಳು 3 : 41 (IRVKN)
ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.
ಪ್ರಲಾಪಗಳು 3 : 42 (IRVKN)
“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.
ಪ್ರಲಾಪಗಳು 3 : 43 (IRVKN)
ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.
ಪ್ರಲಾಪಗಳು 3 : 44 (IRVKN)
ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.
ಪ್ರಲಾಪಗಳು 3 : 45 (IRVKN)
ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.
ಪ್ರಲಾಪಗಳು 3 : 46 (IRVKN)
ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ.
ಪ್ರಲಾಪಗಳು 3 : 47 (IRVKN)
ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.”
ಪ್ರಲಾಪಗಳು 3 : 48 (IRVKN)
ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.
ಪ್ರಲಾಪಗಳು 3 : 49 (IRVKN)
ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ
ಪ್ರಲಾಪಗಳು 3 : 50 (IRVKN)
ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.
ಪ್ರಲಾಪಗಳು 3 : 51 (IRVKN)
ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.
ಪ್ರಲಾಪಗಳು 3 : 52 (IRVKN)
ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
ಪ್ರಲಾಪಗಳು 3 : 53 (IRVKN)
ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ* ಕಲ್ಲುಮುಚ್ಚಿ ಅಥವಾ ಕಲ್ಲೆಸೆದು ನನ್ನ ಪ್ರಾಣವನ್ನು ತೆಗೆದುಬಿಟ್ಟರು
ಪ್ರಲಾಪಗಳು 3 : 54 (IRVKN)
ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.
ಪ್ರಲಾಪಗಳು 3 : 55 (IRVKN)
ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.
ಪ್ರಲಾಪಗಳು 3 : 56 (IRVKN)
ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!
ಪ್ರಲಾಪಗಳು 3 : 57 (IRVKN)
ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.
ಪ್ರಲಾಪಗಳು 3 : 58 (IRVKN)
ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.
ಪ್ರಲಾಪಗಳು 3 : 59 (IRVKN)
ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.
ಪ್ರಲಾಪಗಳು 3 : 60 (IRVKN)
ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.
ಪ್ರಲಾಪಗಳು 3 : 61 (IRVKN)
ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,
ಪ್ರಲಾಪಗಳು 3 : 62 (IRVKN)
ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.
ಪ್ರಲಾಪಗಳು 3 : 63 (IRVKN)
ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.
ಪ್ರಲಾಪಗಳು 3 : 64 (IRVKN)
ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;
ಪ್ರಲಾಪಗಳು 3 : 65 (IRVKN)
ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!
ಪ್ರಲಾಪಗಳು 3 : 66 (IRVKN)
ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66