ಯಾಜಕಕಾಂಡ 1 : 1 (IRVKN)
ಸರ್ವಾಂಗಹೋಮ ವಿಧಾನ ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
ಯಾಜಕಕಾಂಡ 1 : 2 (IRVKN)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
ಯಾಜಕಕಾಂಡ 1 : 3 (IRVKN)
“ ‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
ಯಾಜಕಕಾಂಡ 1 : 4 (IRVKN)
ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
ಯಾಜಕಕಾಂಡ 1 : 5 (IRVKN)
“ ‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
ಯಾಜಕಕಾಂಡ 1 : 6 (IRVKN)
ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
ಯಾಜಕಕಾಂಡ 1 : 7 (IRVKN)
ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
ಯಾಜಕಕಾಂಡ 1 : 8 (IRVKN)
ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
ಯಾಜಕಕಾಂಡ 1 : 9 (IRVKN)
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ಯಾಜಕಕಾಂಡ 1 : 10 (IRVKN)
“ ‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
ಯಾಜಕಕಾಂಡ 1 : 11 (IRVKN)
ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
ಯಾಜಕಕಾಂಡ 1 : 12 (IRVKN)
ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ಯಾಜಕಕಾಂಡ 1 : 13 (IRVKN)
ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ಯಾಜಕಕಾಂಡ 1 : 14 (IRVKN)
“ ‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
ಯಾಜಕಕಾಂಡ 1 : 15 (IRVKN)
ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
ಯಾಜಕಕಾಂಡ 1 : 16 (IRVKN)
ಅದರ * ಅಥವಾ ಎರೆ ಚೀಲ. ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
ಯಾಜಕಕಾಂಡ 1 : 17 (IRVKN)
ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

1 2 3 4 5 6 7 8 9 10 11 12 13 14 15 16 17