ಯಾಜಕಕಾಂಡ 11 : 1 (IRVKN)
ಶುದ್ಧ ಮತ್ತು ಅಶುದ್ಧವಾದ ಪ್ರಾಣಿಗಳು ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
ಯಾಜಕಕಾಂಡ 11 : 2 (IRVKN)
“ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,
ಯಾಜಕಕಾಂಡ 11 : 3 (IRVKN)
ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
ಯಾಜಕಕಾಂಡ 11 : 4 (IRVKN)
ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
ಯಾಜಕಕಾಂಡ 11 : 5 (IRVKN)
ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.
ಯಾಜಕಕಾಂಡ 11 : 6 (IRVKN)
ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
ಯಾಜಕಕಾಂಡ 11 : 7 (IRVKN)
ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
ಯಾಜಕಕಾಂಡ 11 : 8 (IRVKN)
ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
ಯಾಜಕಕಾಂಡ 11 : 9 (IRVKN)
ಶುದ್ಧ ಮತ್ತು ಅಶುದ್ಧವಾದ ಜಲಜಂತುಗಳು “ ‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
ಯಾಜಕಕಾಂಡ 11 : 10 (IRVKN)
ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
ಯಾಜಕಕಾಂಡ 11 : 11 (IRVKN)
ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
ಯಾಜಕಕಾಂಡ 11 : 12 (IRVKN)
ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
ಯಾಜಕಕಾಂಡ 11 : 13 (IRVKN)
ಶುದ್ಧ ಮತ್ತು ಅಶುದ್ಧವಾದ ಪಕ್ಷಿಗಳು “ ‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
ಯಾಜಕಕಾಂಡ 11 : 16 (IRVKN)
ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
ಯಾಜಕಕಾಂಡ 11 : 17 (IRVKN)
ಗೂಬೆ, ಹೆಗ್ಗೂಬೆ, ನೀರುಕಾಗೆ,
ಯಾಜಕಕಾಂಡ 11 : 18 (IRVKN)
ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
ಯಾಜಕಕಾಂಡ 11 : 19 (IRVKN)
ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
ಯಾಜಕಕಾಂಡ 11 : 20 (IRVKN)
ನಿಷಿದ್ಧವಾದ ಕ್ರಿಮಿಕೀಟಗಳು “ ‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
ಯಾಜಕಕಾಂಡ 11 : 21 (IRVKN)
ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
ಯಾಜಕಕಾಂಡ 11 : 22 (IRVKN)
ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
ಯಾಜಕಕಾಂಡ 11 : 23 (IRVKN)
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
ಯಾಜಕಕಾಂಡ 11 : 24 (IRVKN)
ಅಪವಿತ್ರತೆಯನ್ನು ಉಂಟುಮಾಡುವ ಪ್ರಾಣಿಗಳು “ ‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 25 (IRVKN)
ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 26 (IRVKN)
ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
ಯಾಜಕಕಾಂಡ 11 : 27 (IRVKN)
ಚತುಷ್ಪಾದ * ಚತುಷ್ಪಾದ ನಾಲ್ಕು ಕಾಲುಗಳ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
ಯಾಜಕಕಾಂಡ 11 : 28 (IRVKN)
ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
ಯಾಜಕಕಾಂಡ 11 : 29 (IRVKN)
ಅಶುದ್ಧವಾದ ಜಂತುಗಳು “ ‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
ಯಾಜಕಕಾಂಡ 11 : 30 (IRVKN)
ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
ಯಾಜಕಕಾಂಡ 11 : 31 (IRVKN)
ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 32 (IRVKN)
ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
ಯಾಜಕಕಾಂಡ 11 : 33 (IRVKN)
ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
ಯಾಜಕಕಾಂಡ 11 : 34 (IRVKN)
ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
ಯಾಜಕಕಾಂಡ 11 : 35 (IRVKN)
ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
ಯಾಜಕಕಾಂಡ 11 : 36 (IRVKN)
ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
ಯಾಜಕಕಾಂಡ 11 : 37 (IRVKN)
ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
ಯಾಜಕಕಾಂಡ 11 : 38 (IRVKN)
ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
ಯಾಜಕಕಾಂಡ 11 : 39 (IRVKN)
“ ‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 40 (IRVKN)
ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜಕಕಾಂಡ 11 : 41 (IRVKN)
ತಿನ್ನಬಾರದ ಕ್ರಿಮಿಕೀಟಗಳು “ ‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
ಯಾಜಕಕಾಂಡ 11 : 42 (IRVKN)
ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
ಯಾಜಕಕಾಂಡ 11 : 43 (IRVKN)
ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.
ಯಾಜಕಕಾಂಡ 11 : 44 (IRVKN)
ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
ಯಾಜಕಕಾಂಡ 11 : 45 (IRVKN)
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
ಯಾಜಕಕಾಂಡ 11 : 46 (IRVKN)
“ ‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
ಯಾಜಕಕಾಂಡ 11 : 47 (IRVKN)
ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’ ”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47