ಯಾಜಕಕಾಂಡ 13 : 1 (IRVKN)
{ಕುಷ್ಠರೋಗದಿಂದ ಉಂಟಾಗುವ ಅಪವಿತ್ರತೆ} [PS] ಯೆಹೋವನು ಮೋಶೆ ಮತ್ತು ಆರೋನರಿಗೆ,
ಯಾಜಕಕಾಂಡ 13 : 2 (IRVKN)
“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
ಯಾಜಕಕಾಂಡ 13 : 3 (IRVKN)
ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
ಯಾಜಕಕಾಂಡ 13 : 4 (IRVKN)
ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.
ಯಾಜಕಕಾಂಡ 13 : 5 (IRVKN)
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
ಯಾಜಕಕಾಂಡ 13 : 6 (IRVKN)
ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
ಯಾಜಕಕಾಂಡ 13 : 7 (IRVKN)
ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
ಯಾಜಕಕಾಂಡ 13 : 8 (IRVKN)
ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. [PE][PS]
ಯಾಜಕಕಾಂಡ 13 : 9 (IRVKN)
“ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
ಯಾಜಕಕಾಂಡ 13 : 10 (IRVKN)
ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
ಯಾಜಕಕಾಂಡ 13 : 11 (IRVKN)
ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು. [PE][PS]
ಯಾಜಕಕಾಂಡ 13 : 12 (IRVKN)
“ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,
ಯಾಜಕಕಾಂಡ 13 : 13 (IRVKN)
ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.
ಯಾಜಕಕಾಂಡ 13 : 14 (IRVKN)
ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
ಯಾಜಕಕಾಂಡ 13 : 15 (IRVKN)
ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
ಯಾಜಕಕಾಂಡ 13 : 16 (IRVKN)
ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
ಯಾಜಕಕಾಂಡ 13 : 17 (IRVKN)
ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ. [PE][PS]
ಯಾಜಕಕಾಂಡ 13 : 18 (IRVKN)
“ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
ಯಾಜಕಕಾಂಡ 13 : 19 (IRVKN)
ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
ಯಾಜಕಕಾಂಡ 13 : 20 (IRVKN)
ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
ಯಾಜಕಕಾಂಡ 13 : 21 (IRVKN)
ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
ಯಾಜಕಕಾಂಡ 13 : 22 (IRVKN)
ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
ಯಾಜಕಕಾಂಡ 13 : 23 (IRVKN)
ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. [PE][PS]
ಯಾಜಕಕಾಂಡ 13 : 24 (IRVKN)
“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
ಯಾಜಕಕಾಂಡ 13 : 25 (IRVKN)
ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
ಯಾಜಕಕಾಂಡ 13 : 26 (IRVKN)
ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
ಯಾಜಕಕಾಂಡ 13 : 27 (IRVKN)
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
ಯಾಜಕಕಾಂಡ 13 : 28 (IRVKN)
ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ. [PE][PS]
ಯಾಜಕಕಾಂಡ 13 : 29 (IRVKN)
“ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
ಯಾಜಕಕಾಂಡ 13 : 30 (IRVKN)
ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
ಯಾಜಕಕಾಂಡ 13 : 31 (IRVKN)
ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
ಯಾಜಕಕಾಂಡ 13 : 32 (IRVKN)
ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
ಯಾಜಕಕಾಂಡ 13 : 33 (IRVKN)
ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
ಯಾಜಕಕಾಂಡ 13 : 34 (IRVKN)
ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
ಯಾಜಕಕಾಂಡ 13 : 35 (IRVKN)
ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
ಯಾಜಕಕಾಂಡ 13 : 36 (IRVKN)
ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
ಯಾಜಕಕಾಂಡ 13 : 37 (IRVKN)
ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. [PE][PS]
ಯಾಜಕಕಾಂಡ 13 : 38 (IRVKN)
“ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
ಯಾಜಕಕಾಂಡ 13 : 39 (IRVKN)
ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. [PE][PS]
ಯಾಜಕಕಾಂಡ 13 : 40 (IRVKN)
“ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
ಯಾಜಕಕಾಂಡ 13 : 41 (IRVKN)
ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.
ಯಾಜಕಕಾಂಡ 13 : 42 (IRVKN)
ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
ಯಾಜಕಕಾಂಡ 13 : 43 (IRVKN)
ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
ಯಾಜಕಕಾಂಡ 13 : 44 (IRVKN)
ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. [PE][PS]
ಯಾಜಕಕಾಂಡ 13 : 45 (IRVKN)
“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
ಯಾಜಕಕಾಂಡ 13 : 46 (IRVKN)
ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು. [PS]
ಯಾಜಕಕಾಂಡ 13 : 47 (IRVKN)
{ಕುಷ್ಠ ಸೋಂಕಿದ ಬಟ್ಟೆಬರೆ} [PS] “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
ಯಾಜಕಕಾಂಡ 13 : 48 (IRVKN)
ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,
ಯಾಜಕಕಾಂಡ 13 : 49 (IRVKN)
ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
ಯಾಜಕಕಾಂಡ 13 : 50 (IRVKN)
ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
ಯಾಜಕಕಾಂಡ 13 : 51 (IRVKN)
ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
ಯಾಜಕಕಾಂಡ 13 : 52 (IRVKN)
ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
ಯಾಜಕಕಾಂಡ 13 : 53 (IRVKN)
ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
ಯಾಜಕಕಾಂಡ 13 : 54 (IRVKN)
ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
ಯಾಜಕಕಾಂಡ 13 : 55 (IRVKN)
ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜಕಕಾಂಡ 13 : 56 (IRVKN)
ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
ಯಾಜಕಕಾಂಡ 13 : 57 (IRVKN)
ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜಕಕಾಂಡ 13 : 58 (IRVKN)
ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು. [PE][PS]
ಯಾಜಕಕಾಂಡ 13 : 59 (IRVKN)
“ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59

BG:

Opacity:

Color:


Size:


Font: