ಯಾಜಕಕಾಂಡ 14 : 1 (IRVKN)
ಚರ್ಮರೋಗದ ಕುಷ್ಠರೋಗದ ಶುದ್ಧೀಕರಣ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 14 : 2 (IRVKN)
“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
ಯಾಜಕಕಾಂಡ 14 : 3 (IRVKN)
ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
ಯಾಜಕಕಾಂಡ 14 : 4 (IRVKN)
ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
ಯಾಜಕಕಾಂಡ 14 : 5 (IRVKN)
ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
ಯಾಜಕಕಾಂಡ 14 : 6 (IRVKN)
“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
ಯಾಜಕಕಾಂಡ 14 : 7 (IRVKN)
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
ಯಾಜಕಕಾಂಡ 14 : 8 (IRVKN)
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
ಯಾಜಕಕಾಂಡ 14 : 9 (IRVKN)
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
ಯಾಜಕಕಾಂಡ 14 : 10 (IRVKN)
“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ * ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ. ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
ಯಾಜಕಕಾಂಡ 14 : 11 (IRVKN)
ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
ಯಾಜಕಕಾಂಡ 14 : 12 (IRVKN)
ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
ಯಾಜಕಕಾಂಡ 14 : 13 (IRVKN)
ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
ಯಾಜಕಕಾಂಡ 14 : 14 (IRVKN)
ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
ಯಾಜಕಕಾಂಡ 14 : 15 (IRVKN)
ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
ಯಾಜಕಕಾಂಡ 14 : 16 (IRVKN)
ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
ಯಾಜಕಕಾಂಡ 14 : 17 (IRVKN)
ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
ಯಾಜಕಕಾಂಡ 14 : 18 (IRVKN)
ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
ಯಾಜಕಕಾಂಡ 14 : 19 (IRVKN)
“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
ಯಾಜಕಕಾಂಡ 14 : 20 (IRVKN)
ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
ಯಾಜಕಕಾಂಡ 14 : 21 (IRVKN)
“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ † ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ. ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
ಯಾಜಕಕಾಂಡ 14 : 22 (IRVKN)
ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
ಯಾಜಕಕಾಂಡ 14 : 23 (IRVKN)
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
ಯಾಜಕಕಾಂಡ 14 : 24 (IRVKN)
ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
ಯಾಜಕಕಾಂಡ 14 : 25 (IRVKN)
ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
ಯಾಜಕಕಾಂಡ 14 : 26 (IRVKN)
ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
ಯಾಜಕಕಾಂಡ 14 : 27 (IRVKN)
ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
ಯಾಜಕಕಾಂಡ 14 : 28 (IRVKN)
ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
ಯಾಜಕಕಾಂಡ 14 : 29 (IRVKN)
ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
ಯಾಜಕಕಾಂಡ 14 : 30 (IRVKN)
ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
ಯಾಜಕಕಾಂಡ 14 : 31 (IRVKN)
ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
ಯಾಜಕಕಾಂಡ 14 : 33 (IRVKN)
“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು. ಕುಷ್ಠ ಹತ್ತಿದ ಮನೆ ಯೆಹೋವನು ಮೋಶೆ ಮತ್ತು ಆರೋನರಿಗೆ,
ಯಾಜಕಕಾಂಡ 14 : 34 (IRVKN)
“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
ಯಾಜಕಕಾಂಡ 14 : 35 (IRVKN)
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
ಯಾಜಕಕಾಂಡ 14 : 36 (IRVKN)
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
ಯಾಜಕಕಾಂಡ 14 : 37 (IRVKN)
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
ಯಾಜಕಕಾಂಡ 14 : 38 (IRVKN)
ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
ಯಾಜಕಕಾಂಡ 14 : 39 (IRVKN)
ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
ಯಾಜಕಕಾಂಡ 14 : 40 (IRVKN)
ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
ಯಾಜಕಕಾಂಡ 14 : 41 (IRVKN)
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
ಯಾಜಕಕಾಂಡ 14 : 42 (IRVKN)
ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
ಯಾಜಕಕಾಂಡ 14 : 43 (IRVKN)
“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
ಯಾಜಕಕಾಂಡ 14 : 44 (IRVKN)
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
ಯಾಜಕಕಾಂಡ 14 : 45 (IRVKN)
ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
ಯಾಜಕಕಾಂಡ 14 : 46 (IRVKN)
ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 14 : 47 (IRVKN)
ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
ಯಾಜಕಕಾಂಡ 14 : 48 (IRVKN)
“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
ಯಾಜಕಕಾಂಡ 14 : 49 (IRVKN)
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
ಯಾಜಕಕಾಂಡ 14 : 50 (IRVKN)
ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
ಯಾಜಕಕಾಂಡ 14 : 51 (IRVKN)
ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
ಯಾಜಕಕಾಂಡ 14 : 52 (IRVKN)
ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
ಯಾಜಕಕಾಂಡ 14 : 53 (IRVKN)
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
ಯಾಜಕಕಾಂಡ 14 : 54 (IRVKN)
“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
ಯಾಜಕಕಾಂಡ 14 : 55 (IRVKN)
ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
ಯಾಜಕಕಾಂಡ 14 : 56 (IRVKN)
ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
ಯಾಜಕಕಾಂಡ 14 : 57 (IRVKN)
ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57