ಯಾಜಕಕಾಂಡ 16 : 1 (IRVKN)
{ದೋಷಪರಿಹಾರಕದ ಮಹಾದಿನ} [PS] ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಯಾಜಕಕಾಂಡ 16 : 2 (IRVKN)
“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
ಯಾಜಕಕಾಂಡ 16 : 3 (IRVKN)
ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
ಯಾಜಕಕಾಂಡ 16 : 4 (IRVKN)
ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
ಯಾಜಕಕಾಂಡ 16 : 5 (IRVKN)
ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
ಯಾಜಕಕಾಂಡ 16 : 6 (IRVKN)
ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
ಯಾಜಕಕಾಂಡ 16 : 7 (IRVKN)
ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
ಯಾಜಕಕಾಂಡ 16 : 8 (IRVKN)
ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.
ಯಾಜಕಕಾಂಡ 16 : 9 (IRVKN)
ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
ಯಾಜಕಕಾಂಡ 16 : 10 (IRVKN)
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು. [PE][PS]
ಯಾಜಕಕಾಂಡ 16 : 11 (IRVKN)
“ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
ಯಾಜಕಕಾಂಡ 16 : 12 (IRVKN)
ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.
ಯಾಜಕಕಾಂಡ 16 : 13 (IRVKN)
ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
ಯಾಜಕಕಾಂಡ 16 : 14 (IRVKN)
ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು. [PE][PS]
ಯಾಜಕಕಾಂಡ 16 : 15 (IRVKN)
“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
ಯಾಜಕಕಾಂಡ 16 : 16 (IRVKN)
ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.
ಯಾಜಕಕಾಂಡ 16 : 17 (IRVKN)
ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.
ಯಾಜಕಕಾಂಡ 16 : 18 (IRVKN)
ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
ಯಾಜಕಕಾಂಡ 16 : 19 (IRVKN)
ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು. [PE][PS]
ಯಾಜಕಕಾಂಡ 16 : 20 (IRVKN)
“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.
ಯಾಜಕಕಾಂಡ 16 : 21 (IRVKN)
ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
ಯಾಜಕಕಾಂಡ 16 : 22 (IRVKN)
ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. [PE][PS]
ಯಾಜಕಕಾಂಡ 16 : 23 (IRVKN)
“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.
ಯಾಜಕಕಾಂಡ 16 : 24 (IRVKN)
ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
ಯಾಜಕಕಾಂಡ 16 : 25 (IRVKN)
ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. [PE][PS]
ಯಾಜಕಕಾಂಡ 16 : 26 (IRVKN)
“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.
ಯಾಜಕಕಾಂಡ 16 : 27 (IRVKN)
ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
ಯಾಜಕಕಾಂಡ 16 : 28 (IRVKN)
ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು. [PS]
ಯಾಜಕಕಾಂಡ 16 : 29 (IRVKN)
{ಪ್ರಾಯಶ್ಚಿತ್ತ ದಿನಾಚರಣೆ} [PS] “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
ಯಾಜಕಕಾಂಡ 16 : 30 (IRVKN)
ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
ಯಾಜಕಕಾಂಡ 16 : 31 (IRVKN)
ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ. [PE][PS]
ಯಾಜಕಕಾಂಡ 16 : 32 (IRVKN)
“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
ಯಾಜಕಕಾಂಡ 16 : 33 (IRVKN)
ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
ಯಾಜಕಕಾಂಡ 16 : 34 (IRVKN)
ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: