ಯಾಜಕಕಾಂಡ 17 : 1 (IRVKN)
ಯಜ್ಞಪಶುಗಳನ್ನು ದೇವಸ್ಥಾನದಲ್ಲಿಯೇ ವಧಿಸಬೇಕೆಂಬ ನಿಯಮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 17 : 2 (IRVKN)
“ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
ಯಾಜಕಕಾಂಡ 17 : 3 (IRVKN)
ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,
ಯಾಜಕಕಾಂಡ 17 : 4 (IRVKN)
ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಯಾಜಕಕಾಂಡ 17 : 5 (IRVKN)
ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
ಯಾಜಕಕಾಂಡ 17 : 6 (IRVKN)
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
ಯಾಜಕಕಾಂಡ 17 : 7 (IRVKN)
ಅವರು ಇದುವರೆಗೆ ಪೂಜಿಸುತ್ತಿದ್ದ * ಆಡುಗಳ ವಿಗ್ರಹ. ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು † ಅಕ್ಷರಶಃವಾಗಿ ವ್ಯಭಿಚಾರಿಗಳಂತೆ ವರ್ತಿಸುವುದು. ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
ಯಾಜಕಕಾಂಡ 17 : 8 (IRVKN)
ರಕ್ತವನ್ನು ಭುಜಿಸಲೇ ಬಾರದೆಂಬ ನಿಯಮ “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
ಯಾಜಕಕಾಂಡ 17 : 9 (IRVKN)
ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
ಯಾಜಕಕಾಂಡ 17 : 10 (IRVKN)
“ ‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಯಾಜಕಕಾಂಡ 17 : 11 (IRVKN)
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
ಯಾಜಕಕಾಂಡ 17 : 12 (IRVKN)
ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
ಯಾಜಕಕಾಂಡ 17 : 13 (IRVKN)
“ ‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
ಯಾಜಕಕಾಂಡ 17 : 14 (IRVKN)
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
ಯಾಜಕಕಾಂಡ 17 : 15 (IRVKN)
“ ‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
ಯಾಜಕಕಾಂಡ 17 : 16 (IRVKN)
ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’ ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16