ಯಾಜಕಕಾಂಡ 18 : 1 (IRVKN)
ಧರ್ಮವಿರುದ್ಧವಾದ ಲೈಂಗಿಕ ನಿಯಮಗಳು ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 18 : 2 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.
ಯಾಜಕಕಾಂಡ 18 : 3 (IRVKN)
ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.
ಯಾಜಕಕಾಂಡ 18 : 4 (IRVKN)
ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
ಯಾಜಕಕಾಂಡ 18 : 5 (IRVKN)
ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
ಯಾಜಕಕಾಂಡ 18 : 6 (IRVKN)
“ ‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
ಯಾಜಕಕಾಂಡ 18 : 7 (IRVKN)
ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
ಯಾಜಕಕಾಂಡ 18 : 8 (IRVKN)
ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
ಯಾಜಕಕಾಂಡ 18 : 9 (IRVKN)
ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
ಯಾಜಕಕಾಂಡ 18 : 10 (IRVKN)
ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
ಯಾಜಕಕಾಂಡ 18 : 11 (IRVKN)
ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
ಯಾಜಕಕಾಂಡ 18 : 12 (IRVKN)
ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
ಯಾಜಕಕಾಂಡ 18 : 13 (IRVKN)
ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
ಯಾಜಕಕಾಂಡ 18 : 14 (IRVKN)
ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
ಯಾಜಕಕಾಂಡ 18 : 15 (IRVKN)
ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
ಯಾಜಕಕಾಂಡ 18 : 16 (IRVKN)
ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
ಯಾಜಕಕಾಂಡ 18 : 17 (IRVKN)
ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
ಯಾಜಕಕಾಂಡ 18 : 18 (IRVKN)
ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
ಯಾಜಕಕಾಂಡ 18 : 19 (IRVKN)
“ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
ಯಾಜಕಕಾಂಡ 18 : 20 (IRVKN)
ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
ಯಾಜಕಕಾಂಡ 18 : 22 (IRVKN)
“ ‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. “ ‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
ಯಾಜಕಕಾಂಡ 18 : 23 (IRVKN)
ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
ಯಾಜಕಕಾಂಡ 18 : 24 (IRVKN)
“ ‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
ಯಾಜಕಕಾಂಡ 18 : 25 (IRVKN)
ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
ಯಾಜಕಕಾಂಡ 18 : 26 (IRVKN)
ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
ಯಾಜಕಕಾಂಡ 18 : 27 (IRVKN)
ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
ಯಾಜಕಕಾಂಡ 18 : 28 (IRVKN)
ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
ಯಾಜಕಕಾಂಡ 18 : 29 (IRVKN)
ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
ಯಾಜಕಕಾಂಡ 18 : 30 (IRVKN)
ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’ ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30