ಯಾಜಕಕಾಂಡ 19 : 1 (IRVKN)
ಇಸ್ರಾಯೇಲರು ಅನುಸರಿಸಬೇಕಾದ ಧರ್ಮ ನಿಯಮಗಳು ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 19 : 2 (IRVKN)
“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
ಯಾಜಕಕಾಂಡ 19 : 4 (IRVKN)
“ ‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 19 : 5 (IRVKN)
“ ‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. “ ‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
ಯಾಜಕಕಾಂಡ 19 : 6 (IRVKN)
ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜಕಕಾಂಡ 19 : 7 (IRVKN)
ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
ಯಾಜಕಕಾಂಡ 19 : 8 (IRVKN)
ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
ಯಾಜಕಕಾಂಡ 19 : 9 (IRVKN)
“ ‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
ಯಾಜಕಕಾಂಡ 19 : 10 (IRVKN)
ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 19 : 12 (IRVKN)
“ ‘ಕದಿಯಬಾರದು, “ ‘ಮೋಸಮಾಡಬಾರದು, “ ‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
ಯಾಜಕಕಾಂಡ 19 : 13 (IRVKN)
“ ‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು. “ ‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
ಯಾಜಕಕಾಂಡ 19 : 14 (IRVKN)
ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
ಯಾಜಕಕಾಂಡ 19 : 16 (IRVKN)
“ ‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
ಯಾಜಕಕಾಂಡ 19 : 17 (IRVKN)
“ ‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. * ನೆರೆಯವರಿಗೆ ಅಥವಾ ಇತರರಿಗೆ ಅಪಾಯವುಂಟಾಗುವಂಥದ್ದನ್ನು ಮಾಡಬೇಡಿರಿ. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
ಯಾಜಕಕಾಂಡ 19 : 18 (IRVKN)
“ ‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
ಯಾಜಕಕಾಂಡ 19 : 19 (IRVKN)
“ ‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
ಯಾಜಕಕಾಂಡ 19 : 20 (IRVKN)
“ ‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “ ‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “ ‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “ ‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. “ ‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
ಯಾಜಕಕಾಂಡ 19 : 21 (IRVKN)
ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
ಯಾಜಕಕಾಂಡ 19 : 22 (IRVKN)
ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಯಾಜಕಕಾಂಡ 19 : 23 (IRVKN)
“ ‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
ಯಾಜಕಕಾಂಡ 19 : 24 (IRVKN)
ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
ಯಾಜಕಕಾಂಡ 19 : 25 (IRVKN)
ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 19 : 27 (IRVKN)
“ ‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “ ‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
ಯಾಜಕಕಾಂಡ 19 : 28 (IRVKN)
“ ‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
ಯಾಜಕಕಾಂಡ 19 : 29 (IRVKN)
“ ‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
ಯಾಜಕಕಾಂಡ 19 : 30 (IRVKN)
“ ‘ಮಗಳನ್ನು † ಕಾನಾನ್ಯರ ಧಾರ್ಮಿಕ ದೇವಾಲಯಗಳಲ್ಲಿ ವೇಶ್ಯೆಯರು ಇರುತ್ತಿದ್ದರು ಅಲ್ಲಿ ಫಲವತ್ತತೆಯ ದೇವಾನುದೇವತೆಗಳನ್ನು ಪೂಜಿಸಲಾಗುತ್ತಿತ್ತು. ಆರಾಧಕರು ತಮ್ಮ ಹೊಲಗಳು ಮತ್ತು ಹಿಂಡುಗಳು ಫಲವತ್ತಾಗಿರಲು ಅಲ್ಲಿನ ವೇಶ್ಯೆಯರೊಂದಿಗೆ ಸಂಭೋಗ ಮಾಡುತ್ತಿದ್ದರು. ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
ಯಾಜಕಕಾಂಡ 19 : 31 (IRVKN)
“ ‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
ಯಾಜಕಕಾಂಡ 19 : 32 (IRVKN)
“ ‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 19 : 33 (IRVKN)
“ ‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು. “ ‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
ಯಾಜಕಕಾಂಡ 19 : 34 (IRVKN)
ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 19 : 35 (IRVKN)
“ ‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
ಯಾಜಕಕಾಂಡ 19 : 36 (IRVKN)
ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
ಯಾಜಕಕಾಂಡ 19 : 37 (IRVKN)
ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’ ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37