ಯಾಜಕಕಾಂಡ 2 : 1 (IRVKN)
ಧಾನ್ಯ ಸಮರ್ಪಣೆ “ ‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
ಯಾಜಕಕಾಂಡ 2 : 2 (IRVKN)
ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
ಯಾಜಕಕಾಂಡ 2 : 3 (IRVKN)
ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
ಯಾಜಕಕಾಂಡ 2 : 4 (IRVKN)
“ ‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
ಯಾಜಕಕಾಂಡ 2 : 5 (IRVKN)
ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
ಯಾಜಕಕಾಂಡ 2 : 6 (IRVKN)
ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
ಯಾಜಕಕಾಂಡ 2 : 7 (IRVKN)
ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
ಯಾಜಕಕಾಂಡ 2 : 8 (IRVKN)
ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
ಯಾಜಕಕಾಂಡ 2 : 9 (IRVKN)
ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
ಯಾಜಕಕಾಂಡ 2 : 10 (IRVKN)
ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
ಯಾಜಕಕಾಂಡ 2 : 11 (IRVKN)
“ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
ಯಾಜಕಕಾಂಡ 2 : 12 (IRVKN)
ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
ಯಾಜಕಕಾಂಡ 2 : 13 (IRVKN)
ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. * ಅಕ್ಷರಶಃ - ಒಡಂಬಡಿಕೆಯ ಉಪ್ಪು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
ಯಾಜಕಕಾಂಡ 2 : 14 (IRVKN)
“ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಪುಡಿಮಾಡಿದ ಹಿಟ್ಟಿನ ಧಾನ್ಯ. ಉಮ್ಮಿಗೆಯನ್ನು ಸಮರ್ಪಿಸಬೇಕು.
ಯಾಜಕಕಾಂಡ 2 : 15 (IRVKN)
ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
ಯಾಜಕಕಾಂಡ 2 : 16 (IRVKN)
ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

1 2 3 4 5 6 7 8 9 10 11 12 13 14 15 16