ಯಾಜಕಕಾಂಡ 21 : 1 (IRVKN)
ದೇವರ ಘನತೆ ಗೌರವವನ್ನು ಉಳಿಸುವಂತೆ ಯಾಜಕರಿಗೆ ಎಚ್ಚರಿಕೆ ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
ಯಾಜಕಕಾಂಡ 21 : 2 (IRVKN)
ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
ಯಾಜಕಕಾಂಡ 21 : 3 (IRVKN)
ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
ಯಾಜಕಕಾಂಡ 21 : 4 (IRVKN)
ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು * ಮದುವೆಯ ಮೂಲಕ ಅವನು ತನ್ನನ್ನು ತಾನು ಅಪವಿತ್ರಮಾಡಿಕೊಳ್ಳಬಾರದು. ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
ಯಾಜಕಕಾಂಡ 21 : 5 (IRVKN)
19:27-28 ವಚನಗಳನ್ನು ಓದಿರಿ. ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
ಯಾಜಕಕಾಂಡ 21 : 6 (IRVKN)
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
ಯಾಜಕಕಾಂಡ 21 : 7 (IRVKN)
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
ಯಾಜಕಕಾಂಡ 21 : 8 (IRVKN)
ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
ಯಾಜಕಕಾಂಡ 21 : 9 (IRVKN)
ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜಕಕಾಂಡ 21 : 10 (IRVKN)
“ ‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
ಯಾಜಕಕಾಂಡ 21 : 11 (IRVKN)
ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
ಯಾಜಕಕಾಂಡ 21 : 12 (IRVKN)
ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
ಯಾಜಕಕಾಂಡ 21 : 13 (IRVKN)
ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
ಯಾಜಕಕಾಂಡ 21 : 14 (IRVKN)
ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
ಯಾಜಕಕಾಂಡ 21 : 15 (IRVKN)
ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು.
ಯಾಜಕಕಾಂಡ 21 : 16 (IRVKN)
ಅಂಗಹೀನರು ಯಾಜಕ ಉದ್ಯೋಗವನ್ನು ನಡೆಸಬಾರದೆಂಬ ನಿಯಮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 21 : 17 (IRVKN)
“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
ಯಾಜಕಕಾಂಡ 21 : 18 (IRVKN)
ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
ಯಾಜಕಕಾಂಡ 21 : 19 (IRVKN)
ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
ಯಾಜಕಕಾಂಡ 21 : 20 (IRVKN)
ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
ಯಾಜಕಕಾಂಡ 21 : 21 (IRVKN)
ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
ಯಾಜಕಕಾಂಡ 21 : 22 (IRVKN)
ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
ಯಾಜಕಕಾಂಡ 21 : 23 (IRVKN)
ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು.
ಯಾಜಕಕಾಂಡ 21 : 24 (IRVKN)
ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24