ಯಾಜಕಕಾಂಡ 22 : 1 (IRVKN)
ಪರಿಶುದ್ಧ ದ್ರವ್ಯಗಳನ್ನು ಸಾಧಾರಣವೆಂದೆಣಿಸಿಬಾರದೆಂಬ ಯೆಹೋವನ ನಿಯಮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 22 : 2 (IRVKN)
“ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.
ಯಾಜಕಕಾಂಡ 22 : 3 (IRVKN)
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
ಯಾಜಕಕಾಂಡ 22 : 4 (IRVKN)
ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
ಯಾಜಕಕಾಂಡ 22 : 5 (IRVKN)
ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
ಯಾಜಕಕಾಂಡ 22 : 6 (IRVKN)
“ ‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
ಯಾಜಕಕಾಂಡ 22 : 7 (IRVKN)
ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
ಯಾಜಕಕಾಂಡ 22 : 8 (IRVKN)
ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.
ಯಾಜಕಕಾಂಡ 22 : 9 (IRVKN)
ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
ಯಾಜಕಕಾಂಡ 22 : 10 (IRVKN)
“ ‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
ಯಾಜಕಕಾಂಡ 22 : 11 (IRVKN)
ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
ಯಾಜಕಕಾಂಡ 22 : 12 (IRVKN)
ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
ಯಾಜಕಕಾಂಡ 22 : 13 (IRVKN)
ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
ಯಾಜಕಕಾಂಡ 22 : 14 (IRVKN)
ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
ಯಾಜಕಕಾಂಡ 22 : 15 (IRVKN)
ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
ಯಾಜಕಕಾಂಡ 22 : 16 (IRVKN)
ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ * ಅಥವಾ ಆ ನೈವೇದ್ಯಪದಾರ್ಥಗಳನ್ನು. ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು.
ಯಾಜಕಕಾಂಡ 22 : 17 (IRVKN)
ಪೂರ್ಣಾಂಗವಾದ ಪಶುಗಳನ್ನೇ ಸಮರ್ಪಿಸಬೇಕೆಂಬ ನಿಯಮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 22 : 18 (IRVKN)
“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
ಯಾಜಕಕಾಂಡ 22 : 19 (IRVKN)
ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
ಯಾಜಕಕಾಂಡ 22 : 20 (IRVKN)
ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.
ಯಾಜಕಕಾಂಡ 22 : 21 (IRVKN)
ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
ಯಾಜಕಕಾಂಡ 22 : 22 (IRVKN)
ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
ಯಾಜಕಕಾಂಡ 22 : 23 (IRVKN)
ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
ಯಾಜಕಕಾಂಡ 22 : 24 (IRVKN)
ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
ಯಾಜಕಕಾಂಡ 22 : 25 (IRVKN)
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು † ಆ ಪಶುಗಳ ಮಾಲೀಕರು ಅವುಗಳ ಬೀಜಹೊಡೆದ ಕಾರಣ ಯಜ್ಞವಾಗಿ ಸಮರ್ಪಿಸಲು ಅವುಗಳು ಯೋಗ್ಯವಾದವುಗಳಲ್ಲ. ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’ ” ಅಂದನು.
ಯಾಜಕಕಾಂಡ 22 : 26 (IRVKN)
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯಾಜಕಕಾಂಡ 22 : 27 (IRVKN)
“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
ಯಾಜಕಕಾಂಡ 22 : 28 (IRVKN)
ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
ಯಾಜಕಕಾಂಡ 22 : 29 (IRVKN)
“ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
ಯಾಜಕಕಾಂಡ 22 : 30 (IRVKN)
ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
ಯಾಜಕಕಾಂಡ 22 : 31 (IRVKN)
“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
ಯಾಜಕಕಾಂಡ 22 : 32 (IRVKN)
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
ಯಾಜಕಕಾಂಡ 22 : 33 (IRVKN)
ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33