ಯಾಜಕಕಾಂಡ 25 : 1 (IRVKN)
ಸಬ್ಬತ್ ಸ್ವತಂತ್ರ ವರ್ಷ ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,
ಯಾಜಕಕಾಂಡ 25 : 2 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
ಯಾಜಕಕಾಂಡ 25 : 3 (IRVKN)
ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
ಯಾಜಕಕಾಂಡ 25 : 4 (IRVKN)
ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
ಯಾಜಕಕಾಂಡ 25 : 5 (IRVKN)
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
ಯಾಜಕಕಾಂಡ 25 : 6 (IRVKN)
ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
ಯಾಜಕಕಾಂಡ 25 : 7 (IRVKN)
ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
ಯಾಜಕಕಾಂಡ 25 : 8 (IRVKN)
ಜೂಬಿಲಿ ಎಂಬ ಬಿಡುಗಡೆಯ ಸಂವತ್ಸರ “ ‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
ಯಾಜಕಕಾಂಡ 25 : 9 (IRVKN)
ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
ಯಾಜಕಕಾಂಡ 25 : 10 (IRVKN)
ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು * ಇಬ್ರಿಯ ಪದದ ಅರ್ಥ ಟಗರಿನ ಕೊಂಬು. ಇದನ್ನು ಸಂಗೀತದ ಉಪಕರಣವಾಗಿ ಬಳಸುತ್ತಿದ್ದರು. ಪುನಃಸ್ಥಾಪನೆಯ ವರ್ಷವನ್ನು ಪ್ರಚುರಪಡಿಸುವಾಗ ಇದನ್ನು ಊದುತ್ತಿದ್ದರು. ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
ಯಾಜಕಕಾಂಡ 25 : 11 (IRVKN)
ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
ಯಾಜಕಕಾಂಡ 25 : 12 (IRVKN)
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
ಯಾಜಕಕಾಂಡ 25 : 13 (IRVKN)
“ ‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
ಯಾಜಕಕಾಂಡ 25 : 14 (IRVKN)
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
ಯಾಜಕಕಾಂಡ 25 : 15 (IRVKN)
ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
ಯಾಜಕಕಾಂಡ 25 : 16 (IRVKN)
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
ಯಾಜಕಕಾಂಡ 25 : 17 (IRVKN)
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 25 : 18 (IRVKN)
“ ‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
ಯಾಜಕಕಾಂಡ 25 : 19 (IRVKN)
ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
ಯಾಜಕಕಾಂಡ 25 : 20 (IRVKN)
“ ‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
ಯಾಜಕಕಾಂಡ 25 : 21 (IRVKN)
ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
ಯಾಜಕಕಾಂಡ 25 : 22 (IRVKN)
ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
ಯಾಜಕಕಾಂಡ 25 : 23 (IRVKN)
ಸ್ಥಿರ ಆಸ್ತಿಗಳ ಬಿಡುಗಡೆ “ ‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
ಯಾಜಕಕಾಂಡ 25 : 24 (IRVKN)
ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
ಯಾಜಕಕಾಂಡ 25 : 25 (IRVKN)
“ ‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
ಯಾಜಕಕಾಂಡ 25 : 26 (IRVKN)
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
ಯಾಜಕಕಾಂಡ 25 : 27 (IRVKN)
ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
ಯಾಜಕಕಾಂಡ 25 : 28 (IRVKN)
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
ಯಾಜಕಕಾಂಡ 25 : 29 (IRVKN)
“ ‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
ಯಾಜಕಕಾಂಡ 25 : 30 (IRVKN)
ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
ಯಾಜಕಕಾಂಡ 25 : 31 (IRVKN)
ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
ಯಾಜಕಕಾಂಡ 25 : 32 (IRVKN)
ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
ಯಾಜಕಕಾಂಡ 25 : 33 (IRVKN)
ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
ಯಾಜಕಕಾಂಡ 25 : 34 (IRVKN)
ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
ಯಾಜಕಕಾಂಡ 25 : 35 (IRVKN)
ಬಡವರ ವಿಮೋಚನೆ “ ‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
ಯಾಜಕಕಾಂಡ 25 : 36 (IRVKN)
ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
ಯಾಜಕಕಾಂಡ 25 : 37 (IRVKN)
ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
ಯಾಜಕಕಾಂಡ 25 : 38 (IRVKN)
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
ಯಾಜಕಕಾಂಡ 25 : 39 (IRVKN)
“ ‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
ಯಾಜಕಕಾಂಡ 25 : 40 (IRVKN)
ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
ಯಾಜಕಕಾಂಡ 25 : 41 (IRVKN)
ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
ಯಾಜಕಕಾಂಡ 25 : 42 (IRVKN)
ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
ಯಾಜಕಕಾಂಡ 25 : 43 (IRVKN)
ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
ಯಾಜಕಕಾಂಡ 25 : 44 (IRVKN)
ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
ಯಾಜಕಕಾಂಡ 25 : 45 (IRVKN)
ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
ಯಾಜಕಕಾಂಡ 25 : 46 (IRVKN)
ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
ಯಾಜಕಕಾಂಡ 25 : 47 (IRVKN)
“ ‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
ಯಾಜಕಕಾಂಡ 25 : 48 (IRVKN)
ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
ಯಾಜಕಕಾಂಡ 25 : 49 (IRVKN)
ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
ಯಾಜಕಕಾಂಡ 25 : 50 (IRVKN)
ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
ಯಾಜಕಕಾಂಡ 25 : 51 (IRVKN)
ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
ಯಾಜಕಕಾಂಡ 25 : 52 (IRVKN)
ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
ಯಾಜಕಕಾಂಡ 25 : 53 (IRVKN)
ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
ಯಾಜಕಕಾಂಡ 25 : 54 (IRVKN)
ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
ಯಾಜಕಕಾಂಡ 25 : 55 (IRVKN)
ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’ ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55