ಯಾಜಕಕಾಂಡ 3 : 1 (IRVKN)
ಸಮಾಧಾನಯಜ್ಞ “ ‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
ಯಾಜಕಕಾಂಡ 3 : 2 (IRVKN)
ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಯಾಜಕಕಾಂಡ 3 : 3 (IRVKN)
ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಯಾಜಕಕಾಂಡ 3 : 4 (IRVKN)
ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
ಯಾಜಕಕಾಂಡ 3 : 5 (IRVKN)
ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
ಯಾಜಕಕಾಂಡ 3 : 6 (IRVKN)
“ ‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
ಯಾಜಕಕಾಂಡ 3 : 7 (IRVKN)
ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
ಯಾಜಕಕಾಂಡ 3 : 8 (IRVKN)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಯಾಜಕಕಾಂಡ 3 : 9 (IRVKN)
ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಯಾಜಕಕಾಂಡ 3 : 10 (IRVKN)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
ಯಾಜಕಕಾಂಡ 3 : 11 (IRVKN)
ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
ಯಾಜಕಕಾಂಡ 3 : 12 (IRVKN)
“ ‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
ಯಾಜಕಕಾಂಡ 3 : 13 (IRVKN)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಯಾಜಕಕಾಂಡ 3 : 14 (IRVKN)
ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಯಾಜಕಕಾಂಡ 3 : 15 (IRVKN)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
ಯಾಜಕಕಾಂಡ 3 : 16 (IRVKN)
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
ಯಾಜಕಕಾಂಡ 3 : 17 (IRVKN)
ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’ ” ಅಂದನು.
❮
❯
1
2
3
4
5
6
7
8
9
10
11
12
13
14
15
16
17