ಯಾಜಕಕಾಂಡ 4 : 1 (IRVKN)
ತಿಳಿಯದೆ ತಪ್ಪುಮಾಡಿದವನ ದೋಷಪರಿಹಾರ ಯೆಹೋವನು ಮೋಶೆಗೆ ಇಂತೆಂದನು,
ಯಾಜಕಕಾಂಡ 4 : 2 (IRVKN)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
ಯಾಜಕಕಾಂಡ 4 : 3 (IRVKN)
* ಮಹಾಯಾಜಕನು. ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
ಯಾಜಕಕಾಂಡ 4 : 4 (IRVKN)
ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
ಯಾಜಕಕಾಂಡ 4 : 5 (IRVKN)
ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
ಯಾಜಕಕಾಂಡ 4 : 6 (IRVKN)
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
ಯಾಜಕಕಾಂಡ 4 : 7 (IRVKN)
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4 : 8 (IRVKN)
ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
ಯಾಜಕಕಾಂಡ 4 : 9 (IRVKN)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
ಯಾಜಕಕಾಂಡ 4 : 10 (IRVKN)
ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
ಯಾಜಕಕಾಂಡ 4 : 11 (IRVKN)
ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
ಯಾಜಕಕಾಂಡ 4 : 12 (IRVKN)
ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
ಯಾಜಕಕಾಂಡ 4 : 13 (IRVKN)
ಇಸ್ರಾಯೇಲ್ ಸಮೂಹದ ದೋಷಪರಿಹಾರ “ ‘ಇಸ್ರಾಯೇಲರ † ಕೂಡಿಬಂದ ಎಲ್ಲಾ ಇಸ್ರಾಯೇಲರು. ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
ಯಾಜಕಕಾಂಡ 4 : 14 (IRVKN)
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
ಯಾಜಕಕಾಂಡ 4 : 15 (IRVKN)
‡ ಕೂಡಿಬಂದ ಇಸ್ರಾಯೇಲರು. ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
ಯಾಜಕಕಾಂಡ 4 : 16 (IRVKN)
ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
ಯಾಜಕಕಾಂಡ 4 : 17 (IRVKN)
ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
ಯಾಜಕಕಾಂಡ 4 : 18 (IRVKN)
ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4 : 19 (IRVKN)
ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
ಯಾಜಕಕಾಂಡ 4 : 20 (IRVKN)
ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
ಯಾಜಕಕಾಂಡ 4 : 21 (IRVKN)
ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
ಯಾಜಕಕಾಂಡ 4 : 22 (IRVKN)
ಮುಖ್ಯಾಧಿಕಾರಿಯ ದೋಷಪರಿಹಾರ “ ‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
ಯಾಜಕಕಾಂಡ 4 : 23 (IRVKN)
ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
ಯಾಜಕಕಾಂಡ 4 : 24 (IRVKN)
ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
ಯಾಜಕಕಾಂಡ 4 : 25 (IRVKN)
ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4 : 26 (IRVKN)
ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಯಾಜಕಕಾಂಡ 4 : 27 (IRVKN)
ಸಾಮಾನ್ಯ ಜನರ ದೋಷಪರಿಹಾರ “ ‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
ಯಾಜಕಕಾಂಡ 4 : 28 (IRVKN)
ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
ಯಾಜಕಕಾಂಡ 4 : 29 (IRVKN)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
ಯಾಜಕಕಾಂಡ 4 : 30 (IRVKN)
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4 : 31 (IRVKN)
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಯಾಜಕಕಾಂಡ 4 : 32 (IRVKN)
“ ‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
ಯಾಜಕಕಾಂಡ 4 : 33 (IRVKN)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
ಯಾಜಕಕಾಂಡ 4 : 34 (IRVKN)
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4 : 35 (IRVKN)
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35