ಯಾಜಕಕಾಂಡ 6 : 1 (IRVKN)
{ಇತರ ಪಾಪ ಅಪರಾಧಗಳಿಗೆ ಪ್ರಾಯಶ್ಚಿತ್ತ ಯಜ್ಞ} [PS] ಯೆಹೋವನು ಮೋಶೆಗೆ,
ಯಾಜಕಕಾಂಡ 6 : 2 (IRVKN)
“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
ಯಾಜಕಕಾಂಡ 6 : 3 (IRVKN)
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
ಯಾಜಕಕಾಂಡ 6 : 4 (IRVKN)
ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
ಯಾಜಕಕಾಂಡ 6 : 5 (IRVKN)
ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
ಯಾಜಕಕಾಂಡ 6 : 6 (IRVKN)
ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
ಯಾಜಕಕಾಂಡ 6 : 7 (IRVKN)
ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು. [PS]
ಯಾಜಕಕಾಂಡ 6 : 8 (IRVKN)
{ಸರ್ವಾಂಗಹೋಮ ವಿಷಯವಾದ ನಿಯಮಗಳು} [PS] ಅನಂತರ ಯೆಹೋವನು ಮೋಶೆಗೆ,
ಯಾಜಕಕಾಂಡ 6 : 9 (IRVKN)
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
ಯಾಜಕಕಾಂಡ 6 : 10 (IRVKN)
ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
ಯಾಜಕಕಾಂಡ 6 : 11 (IRVKN)
ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
ಯಾಜಕಕಾಂಡ 6 : 12 (IRVKN)
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
ಯಾಜಕಕಾಂಡ 6 : 13 (IRVKN)
ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು. [PS]
ಯಾಜಕಕಾಂಡ 6 : 14 (IRVKN)
{ಧಾನ್ಯನೈವೇದ್ಯ} [PS] “ ‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
ಯಾಜಕಕಾಂಡ 6 : 15 (IRVKN)
ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
ಯಾಜಕಕಾಂಡ 6 : 16 (IRVKN)
ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
ಯಾಜಕಕಾಂಡ 6 : 17 (IRVKN)
ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
ಯಾಜಕಕಾಂಡ 6 : 18 (IRVKN)
ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’ ” ಎಂದು ಹೇಳಿದನು. [PE][PS]
ಯಾಜಕಕಾಂಡ 6 : 19 (IRVKN)
ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
ಯಾಜಕಕಾಂಡ 6 : 20 (IRVKN)
“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ [* ಸುಮಾರು ಒಂದು ಕಿಲೋಗ್ರಾಂ.] ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
ಯಾಜಕಕಾಂಡ 6 : 21 (IRVKN)
ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
ಯಾಜಕಕಾಂಡ 6 : 22 (IRVKN)
ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
ಯಾಜಕಕಾಂಡ 6 : 23 (IRVKN)
ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು. [PS]
ಯಾಜಕಕಾಂಡ 6 : 24 (IRVKN)
{ದೋಷಪರಿಹಾರಕ ಯಜ್ಞದ ನಿಯಮಗಳು} [PS] ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
ಯಾಜಕಕಾಂಡ 6 : 25 (IRVKN)
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
ಯಾಜಕಕಾಂಡ 6 : 26 (IRVKN)
ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
ಯಾಜಕಕಾಂಡ 6 : 27 (IRVKN)
ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
ಯಾಜಕಕಾಂಡ 6 : 28 (IRVKN)
ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
ಯಾಜಕಕಾಂಡ 6 : 29 (IRVKN)
ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
ಯಾಜಕಕಾಂಡ 6 : 30 (IRVKN)
ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: