ಲೂಕನು 10 : 1 (IRVKN)
{ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಕಳುಹಿಸಿದ್ದು} [PS] ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು [* ಕೆಲವು ಪ್ರತಿಗಳಲ್ಲಿ ಎಪ್ಪತ್ತೆರಡು ಎಂದು ಬರೆಯಲಾಗಿದೆ.] ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
ಲೂಕನು 10 : 2 (IRVKN)
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
ಲೂಕನು 10 : 3 (IRVKN)
ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
ಲೂಕನು 10 : 4 (IRVKN)
ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
ಲೂಕನು 10 : 5 (IRVKN)
ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
ಲೂಕನು 10 : 6 (IRVKN)
ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
ಲೂಕನು 10 : 7 (IRVKN)
ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
ಲೂಕನು 10 : 8 (IRVKN)
ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
ಲೂಕನು 10 : 9 (IRVKN)
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
ಲೂಕನು 10 : 10 (IRVKN)
ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
ಲೂಕನು 10 : 11 (IRVKN)
‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
ಲೂಕನು 10 : 12 (IRVKN)
ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
ಲೂಕನು 10 : 13 (IRVKN)
ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
ಲೂಕನು 10 : 14 (IRVKN)
ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
ಲೂಕನು 10 : 15 (IRVKN)
ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
ಲೂಕನು 10 : 16 (IRVKN)
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. [PE][PS]
ಲೂಕನು 10 : 17 (IRVKN)
ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
ಲೂಕನು 10 : 18 (IRVKN)
ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
ಲೂಕನು 10 : 19 (IRVKN)
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
ಲೂಕನು 10 : 20 (IRVKN)
ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. [PE][PS]
ಲೂಕನು 10 : 21 (IRVKN)
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಲೂಕನು 10 : 22 (IRVKN)
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
ಲೂಕನು 10 : 23 (IRVKN)
ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
ಲೂಕನು 10 : 24 (IRVKN)
ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು. [PS]
ಲೂಕನು 10 : 25 (IRVKN)
{ಒಳ್ಳೆಯ ಸಮಾರ್ಯದವನ ಸಾಮ್ಯ} [PS] ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
ಲೂಕನು 10 : 26 (IRVKN)
ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
ಲೂಕನು 10 : 27 (IRVKN)
ಅದಕ್ಕೆ ಅವನು, “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
ಲೂಕನು 10 : 28 (IRVKN)
ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
ಲೂಕನು 10 : 29 (IRVKN)
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
ಲೂಕನು 10 : 30 (IRVKN)
ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
ಲೂಕನು 10 : 31 (IRVKN)
ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
ಲೂಕನು 10 : 32 (IRVKN)
ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
ಲೂಕನು 10 : 33 (IRVKN)
ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
ಲೂಕನು 10 : 34 (IRVKN)
ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
ಲೂಕನು 10 : 35 (IRVKN)
ಮರುದಿನ ಅವನು ಎರಡು ದಿನಾರಿಗಳನ್ನು [† ಒಂದು ದಿನಾರಿ ಅಂದರೆ ಒಂದು ಬೆಳ್ಳಿ ನಾಣ್ಯ. ಅದು ಒಂದು ದಿನದ ಕೂಲಿಗೆ ಸಮವಾಗಿದೆ. ] ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
ಲೂಕನು 10 : 36 (IRVKN)
ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
ಲೂಕನು 10 : 37 (IRVKN)
ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. [PS]
ಲೂಕನು 10 : 38 (IRVKN)
{ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು} [PS] ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
ಲೂಕನು 10 : 39 (IRVKN)
ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಲೂಕನು 10 : 40 (IRVKN)
ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
ಲೂಕನು 10 : 41 (IRVKN)
ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
ಲೂಕನು 10 : 42 (IRVKN)
ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: