ಲೂಕನು 11 : 1 (IRVKN)
{ಪ್ರಾರ್ಥನೆಯ ಕುರಿತು ಯೇಸು ಬೋಧಿಸಿದ್ದು} (ಮತ್ತಾ 6:9-13; 7:7-11) [PS] ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
ಲೂಕನು 11 : 2 (IRVKN)
ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, [QBR] “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. [QBR2] ನಿನ್ನ ರಾಜ್ಯವು ಬರಲಿ. [QBR]
ಲೂಕನು 11 : 3 (IRVKN)
ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. [QBR]
ಲೂಕನು 11 : 4 (IRVKN)
ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ [QBR2] ನಮ್ಮ ಪಾಪಗಳನ್ನು ಕ್ಷಮಿಸು. [QBR2] ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. [PE][PS]
ಲೂಕನು 11 : 5 (IRVKN)
ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.
ಲೂಕನು 11 : 6 (IRVKN)
ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,
ಲೂಕನು 11 : 7 (IRVKN)
ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
ಲೂಕನು 11 : 8 (IRVKN)
ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
ಲೂಕನು 11 : 9 (IRVKN)
ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
ಲೂಕನು 11 : 10 (IRVKN)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
ಲೂಕನು 11 : 11 (IRVKN)
ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
ಲೂಕನು 11 : 12 (IRVKN)
ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
ಲೂಕನು 11 : 13 (IRVKN)
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು. [PS]
ಲೂಕನು 11 : 14 (IRVKN)
{ಯೇಸು ಮತ್ತು ಬೆಲ್ಜೆಬೂಲ} (ಮತ್ತಾ 12:22-30; ಮಾರ್ಕ 3:20-27) [PS] ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
ಲೂಕನು 11 : 15 (IRVKN)
ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
ಲೂಕನು 11 : 16 (IRVKN)
ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.
ಲೂಕನು 11 : 17 (IRVKN)
ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.
ಲೂಕನು 11 : 18 (IRVKN)
ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
ಲೂಕನು 11 : 19 (IRVKN)
ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
ಲೂಕನು 11 : 20 (IRVKN)
ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. [PE][PS]
ಲೂಕನು 11 : 21 (IRVKN)
“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;
ಲೂಕನು 11 : 22 (IRVKN)
ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
ಲೂಕನು 11 : 23 (IRVKN)
ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. [PS]
ಲೂಕನು 11 : 24 (IRVKN)
{ದೆವ್ವದ ಮರಳುವಿಕೆ} (ಮತ್ತಾ 12:43-45) [PS] “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
ಲೂಕನು 11 : 25 (IRVKN)
ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,
ಲೂಕನು 11 : 26 (IRVKN)
ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು. [PS]
ಲೂಕನು 11 : 27 (IRVKN)
{ನಿಜವಾದ ಆನಂದ} [PS] ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
ಲೂಕನು 11 : 28 (IRVKN)
ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು. [PS]
ಲೂಕನು 11 : 29 (IRVKN)
{ಸೂಚಕಕಾರ್ಯದ ಗುರುತಿಗಾಗಿ ಬೇಡಿಕೆ} (ಮತ್ತಾ 12:38-42) [PS] ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
ಲೂಕನು 11 : 30 (IRVKN)
ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.
ಲೂಕನು 11 : 31 (IRVKN)
ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
ಲೂಕನು 11 : 32 (IRVKN)
ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. [PS]
ಲೂಕನು 11 : 33 (IRVKN)
{ದೇಹದ ಬೆಳಕು} (ಮತ್ತಾ 5:15; 6:22-23) [PS] “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ಲೂಕನು 11 : 34 (IRVKN)
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
ಲೂಕನು 11 : 35 (IRVKN)
ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.
ಲೂಕನು 11 : 36 (IRVKN)
ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. [PS]
ಲೂಕನು 11 : 37 (IRVKN)
{ಯೇಸು ಫರಿಸಾಯರ ಮತ್ತು ಧರ್ಮೋಪದೇಶಕರ ದುರ್ಗುಣಗಳನ್ನು ಖಂಡಿಸಿದ್ದು} (ಮತ್ತಾ 23:1-36; ಮಾರ್ಕ 12:38-40) [PS] ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
ಲೂಕನು 11 : 38 (IRVKN)
ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
ಲೂಕನು 11 : 39 (IRVKN)
ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
ಲೂಕನು 11 : 40 (IRVKN)
ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.
ಲೂಕನು 11 : 41 (IRVKN)
ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು. [PE][PS]
ಲೂಕನು 11 : 42 (IRVKN)
“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. [PE][PS]
ಲೂಕನು 11 : 43 (IRVKN)
“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.
ಲೂಕನು 11 : 44 (IRVKN)
ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. [PE][PS]
ಲೂಕನು 11 : 45 (IRVKN)
ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
ಲೂಕನು 11 : 46 (IRVKN)
ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
ಲೂಕನು 11 : 47 (IRVKN)
ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
ಲೂಕನು 11 : 48 (IRVKN)
ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
ಲೂಕನು 11 : 49 (IRVKN)
ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
ಲೂಕನು 11 : 50 (IRVKN)
[50-51] ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
ಲೂಕನು 11 : 51 (IRVKN)
[NIL]
ಲೂಕನು 11 : 52 (IRVKN)
ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. [PE][PS]
ಲೂಕನು 11 : 53 (IRVKN)
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
ಲೂಕನು 11 : 54 (IRVKN)
ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54

BG:

Opacity:

Color:


Size:


Font: