ಲೂಕನು 12 : 1 (IRVKN)
{ಕಪಟತನದ ಬಗ್ಗೆ ಎಚ್ಚರಿಕೆ} (ಮತ್ತಾ 10:26-31) [PS] ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
ಲೂಕನು 12 : 2 (IRVKN)
ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.
ಲೂಕನು 12 : 3 (IRVKN)
ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. [PE][PS]
ಲೂಕನು 12 : 4 (IRVKN)
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
ಲೂಕನು 12 : 5 (IRVKN)
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
ಲೂಕನು 12 : 6 (IRVKN)
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
ಲೂಕನು 12 : 7 (IRVKN)
ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಮತ್ತಾ 10:32-33; 12:32; 10:19,20 [PE][PS]
ಲೂಕನು 12 : 8 (IRVKN)
{ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು} [PS] “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
ಲೂಕನು 12 : 9 (IRVKN)
ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
ಲೂಕನು 12 : 10 (IRVKN)
ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
ಲೂಕನು 12 : 11 (IRVKN)
ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
ಲೂಕನು 12 : 12 (IRVKN)
ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು. [PS]
ಲೂಕನು 12 : 13 (IRVKN)
{ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ} [PS] ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
ಲೂಕನು 12 : 14 (IRVKN)
ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
ಲೂಕನು 12 : 15 (IRVKN)
ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. [PE][PS]
ಲೂಕನು 12 : 16 (IRVKN)
ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
ಲೂಕನು 12 : 17 (IRVKN)
ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
ಲೂಕನು 12 : 18 (IRVKN)
‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
ಲೂಕನು 12 : 19 (IRVKN)
ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. [PE][PS]
ಲೂಕನು 12 : 20 (IRVKN)
“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
ಲೂಕನು 12 : 21 (IRVKN)
ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು. [PS]
ಲೂಕನು 12 : 22 (IRVKN)
{ದೇವರಲ್ಲಿ ಭರವಸೆ} (ಮತ್ತಾ 6:25-34) [PS] ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
ಲೂಕನು 12 : 23 (IRVKN)
ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.
ಲೂಕನು 12 : 24 (IRVKN)
ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
ಲೂಕನು 12 : 25 (IRVKN)
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು [* ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ಅಥವಾ ಚಿಂತೆಮಾಡಿ ಮಾಡಿ ಒಂದು ಮೊಳ ಉದ್ದ ಬೆಳೆಯುವುದು. ] ನಿಮ್ಮಲ್ಲಿ ಯಾರಿಂದಾದೀತು?
ಲೂಕನು 12 : 26 (IRVKN)
ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
ಲೂಕನು 12 : 27 (IRVKN)
ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
ಲೂಕನು 12 : 28 (IRVKN)
ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
ಲೂಕನು 12 : 29 (IRVKN)
ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.
ಲೂಕನು 12 : 30 (IRVKN)
ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
ಲೂಕನು 12 : 31 (IRVKN)
ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
ಲೂಕನು 12 : 32 (IRVKN)
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಲೂಕನು 12 : 33 (IRVKN)
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
ಲೂಕನು 12 : 34 (IRVKN)
ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ. [PS]
ಲೂಕನು 12 : 35 (IRVKN)
{ಎಚ್ಚರಿಕೆಯುಳ್ಳ ಆಳುಗಳು} (ಮತ್ತಾ 24:45-51) [PS] “ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
ಲೂಕನು 12 : 36 (IRVKN)
ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
ಲೂಕನು 12 : 37 (IRVKN)
ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಲೂಕನು 12 : 38 (IRVKN)
ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
ಲೂಕನು 12 : 39 (IRVKN)
ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
ಲೂಕನು 12 : 40 (IRVKN)
ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು. [PE][PS]
ಲೂಕನು 12 : 41 (IRVKN)
ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, [PE][PS]
ಲೂಕನು 12 : 42 (IRVKN)
ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
ಲೂಕನು 12 : 43 (IRVKN)
ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.
ಲೂಕನು 12 : 44 (IRVKN)
ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಲೂಕನು 12 : 45 (IRVKN)
ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
ಲೂಕನು 12 : 46 (IRVKN)
ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
ಲೂಕನು 12 : 47 (IRVKN)
ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
ಲೂಕನು 12 : 48 (IRVKN)
ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. [PS]
ಲೂಕನು 12 : 49 (IRVKN)
{ಯೇಸುವಿನ ನಿಮಿತ್ತ ವಿಭಜನೆಗಳು} (ಮತ್ತಾ 10:34-36) [PS] “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
ಲೂಕನು 12 : 50 (IRVKN)
ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
ಲೂಕನು 12 : 51 (IRVKN)
ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
ಲೂಕನು 12 : 52 (IRVKN)
ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
ಲೂಕನು 12 : 53 (IRVKN)
ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. ಮತ್ತಾ 16:2,3 [PE][PS]
ಲೂಕನು 12 : 54 (IRVKN)
{ಕಾಲದ ಅರ್ಥೈಸುವಿಕೆ} [PS] ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
ಲೂಕನು 12 : 55 (IRVKN)
ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
ಲೂಕನು 12 : 56 (IRVKN)
ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? ಮತ್ತಾ 5:25,26 [PE][PS]
ಲೂಕನು 12 : 57 (IRVKN)
{ಪ್ರತಿವಾದಿಯೊಂದಿಗೆ ಸಂಧಾನ} [PS] “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?
ಲೂಕನು 12 : 58 (IRVKN)
ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
ಲೂಕನು 12 : 59 (IRVKN)
ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59

BG:

Opacity:

Color:


Size:


Font: