ಲೂಕನು 13 : 1 (IRVKN)
ಪಶ್ಚಾತ್ತಾಪಪಡಿರಿ ಇಲ್ಲವಾದರೆ ನಾಶವಾಗುವಿರಿ ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
ಲೂಕನು 13 : 2 (IRVKN)
ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
ಲೂಕನು 13 : 3 (IRVKN)
ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
ಲೂಕನು 13 : 4 (IRVKN)
ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
ಲೂಕನು 13 : 5 (IRVKN)
ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
ಲೂಕನು 13 : 6 (IRVKN)
ಫಲ ಕೊಡದ ಅಂಜೂರಮರದ ಸಾಮ್ಯ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
ಲೂಕನು 13 : 7 (IRVKN)
ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
ಲೂಕನು 13 : 8 (IRVKN)
ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
ಲೂಕನು 13 : 9 (IRVKN)
ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’ ” ಎಂದು ಉತ್ತರ ಕೊಟ್ಟನು.
ಲೂಕನು 13 : 10 (IRVKN)
ಯೇಸು ಸಬ್ಬತ್ ದಿನದಲ್ಲಿ ಗೂನಿಯಾದ ಸ್ತ್ರೀಯನ್ನು ಸ್ವಸ್ಥಮಾಡಿದ್ದು ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
ಲೂಕನು 13 : 11 (IRVKN)
ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
ಲೂಕನು 13 : 12 (IRVKN)
ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
ಲೂಕನು 13 : 13 (IRVKN)
ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
ಲೂಕನು 13 : 14 (IRVKN)
ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
ಲೂಕನು 13 : 15 (IRVKN)
ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
ಲೂಕನು 13 : 16 (IRVKN)
ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
ಲೂಕನು 13 : 17 (IRVKN)
ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಲೂಕನು 13 : 18 (IRVKN)
ಸಾಸಿವೆಕಾಳಿನ ಹಾಗೂ ಹುಳಿಹಿಟ್ಟಿನ ಸಾಮ್ಯ
ಮತ್ತಾ 13:31-33; ಮಾರ್ಕ 4:30-32 ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
ಲೂಕನು 13 : 19 (IRVKN)
ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
ಲೂಕನು 13 : 20 (IRVKN)
ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
ಲೂಕನು 13 : 21 (IRVKN)
ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
ಲೂಕನು 13 : 22 (IRVKN)
ಇಕ್ಕಟ್ಟಾದ ಬಾಗಿಲು
ಮತ್ತಾ 7:13,14,21-23 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
ಲೂಕನು 13 : 23 (IRVKN)
ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
ಲೂಕನು 13 : 24 (IRVKN)
ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
ಲೂಕನು 13 : 25 (IRVKN)
ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
ಲೂಕನು 13 : 26 (IRVKN)
ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
ಲೂಕನು 13 : 27 (IRVKN)
ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
ಲೂಕನು 13 : 28 (IRVKN)
ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
ಲೂಕನು 13 : 29 (IRVKN)
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
ಲೂಕನು 13 : 30 (IRVKN)
ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
ಲೂಕನು 13 : 31 (IRVKN)
ಯೇಸು ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು
ಮತ್ತಾ 23:37-39 ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
ಲೂಕನು 13 : 32 (IRVKN)
ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
ಲೂಕನು 13 : 33 (IRVKN)
ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
ಲೂಕನು 13 : 34 (IRVKN)
ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
ಲೂಕನು 13 : 35 (IRVKN)
ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35