ಲೂಕನು 17 : 1 (IRVKN)
ಯೇಸುವಿನ ನಾನಾ ವಚನಗಳು
ಮತ್ತಾ 18:6,7,21,22; ಮಾರ್ಕ 9:42
ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
ಲೂಕನು 17 : 2 (IRVKN)
ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
ಲೂಕನು 17 : 3 (IRVKN)
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
ಲೂಕನು 17 : 4 (IRVKN)
ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
ಲೂಕನು 17 : 5 (IRVKN)
ನಂಬಿಕೆ ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
ಲೂಕನು 17 : 6 (IRVKN)
ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
ಲೂಕನು 17 : 7 (IRVKN)
ಆಳಿನ ಕರ್ತವ್ಯ “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
ಲೂಕನು 17 : 8 (IRVKN)
ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
ಲೂಕನು 17 : 9 (IRVKN)
ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
ಲೂಕನು 17 : 10 (IRVKN)
ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
ಲೂಕನು 17 : 11 (IRVKN)
ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದ್ದು ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
ಲೂಕನು 17 : 12 (IRVKN)
ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
ಲೂಕನು 17 : 13 (IRVKN)
“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
ಲೂಕನು 17 : 14 (IRVKN)
ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
ಲೂಕನು 17 : 15 (IRVKN)
ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
ಲೂಕನು 17 : 16 (IRVKN)
ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
ಲೂಕನು 17 : 17 (IRVKN)
ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
ಲೂಕನು 17 : 18 (IRVKN)
ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
ಲೂಕನು 17 : 19 (IRVKN)
ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
ಲೂಕನು 17 : 20 (IRVKN)
ದೇವರ ರಾಜ್ಯದ ಆಗಮನ
ಮತ್ತಾ 24:23-28,37-41
ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
ಲೂಕನು 17 : 21 (IRVKN)
‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
ಲೂಕನು 17 : 22 (IRVKN)
ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
ಲೂಕನು 17 : 23 (IRVKN)
ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
ಲೂಕನು 17 : 24 (IRVKN)
ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
ಲೂಕನು 17 : 25 (IRVKN)
ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
ಲೂಕನು 17 : 26 (IRVKN)
ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
ಲೂಕನು 17 : 27 (IRVKN)
ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
ಲೂಕನು 17 : 28 (IRVKN)
ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
ಲೂಕನು 17 : 29 (IRVKN)
ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
ಲೂಕನು 17 : 30 (IRVKN)
ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
ಲೂಕನು 17 : 31 (IRVKN)
ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
ಲೂಕನು 17 : 32 (IRVKN)
ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
ಲೂಕನು 17 : 33 (IRVKN)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
ಲೂಕನು 17 : 34 (IRVKN)
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
ಲೂಕನು 17 : 35 (IRVKN)
ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
ಲೂಕನು 17 : 36 (IRVKN)
* ಕೆಲವು ಪ್ರತಿಗಳಲ್ಲಿ ಈ ವಚನವಿಲ್ಲ. “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
ಲೂಕನು 17 : 37 (IRVKN)
ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37