ಲೂಕನು 18 : 1 (IRVKN)
{ವಿಧವೆಯ ಹಾಗೂ ನ್ಯಾಯಾಧಿಪತಿಯ ಸಾಮ್ಯ} [PS] ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
ಲೂಕನು 18 : 2 (IRVKN)
ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
ಲೂಕನು 18 : 3 (IRVKN)
ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
ಲೂಕನು 18 : 4 (IRVKN)
ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
ಲೂಕನು 18 : 5 (IRVKN)
ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
ಲೂಕನು 18 : 6 (IRVKN)
ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
ಲೂಕನು 18 : 7 (IRVKN)
ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
ಲೂಕನು 18 : 8 (IRVKN)
ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು. [PS]
ಲೂಕನು 18 : 9 (IRVKN)
{ಫರಿಸಾಯನ ಹಾಗೂ ಸುಂಕದವನ ಪ್ರಾರ್ಥನೆ} [PS] ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
ಲೂಕನು 18 : 10 (IRVKN)
ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
ಲೂಕನು 18 : 11 (IRVKN)
ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
ಲೂಕನು 18 : 12 (IRVKN)
ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
ಲೂಕನು 18 : 13 (IRVKN)
ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
ಲೂಕನು 18 : 14 (IRVKN)
ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು. [PS]
ಲೂಕನು 18 : 15 (IRVKN)
{ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮತ್ತಾ 19:13-15; ಮಾರ್ಕ 10:13-16) [PS] ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
ಲೂಕನು 18 : 16 (IRVKN)
ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
ಲೂಕನು 18 : 17 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು. [PS]
ಲೂಕನು 18 : 18 (IRVKN)
{ಐಶ್ವರ್ಯವಂತನಾದ ಅಧಿಕಾರಿ} (ಮತ್ತಾ 19:16-29; ಮಾರ್ಕ 10:17-30) [PS] ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
ಲೂಕನು 18 : 19 (IRVKN)
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
ಲೂಕನು 18 : 20 (IRVKN)
‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
ಲೂಕನು 18 : 21 (IRVKN)
ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು. [PE][PS]
ಲೂಕನು 18 : 22 (IRVKN)
ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಲೂಕನು 18 : 23 (IRVKN)
ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
ಲೂಕನು 18 : 24 (IRVKN)
ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
ಲೂಕನು 18 : 25 (IRVKN)
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
ಲೂಕನು 18 : 26 (IRVKN)
ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
ಲೂಕನು 18 : 27 (IRVKN)
ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು. [PE][PS]
ಲೂಕನು 18 : 28 (IRVKN)
ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
ಲೂಕನು 18 : 29 (IRVKN)
ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
ಲೂಕನು 18 : 30 (IRVKN)
ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. [PS]
ಲೂಕನು 18 : 31 (IRVKN)
{ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು} (ಮತ್ತಾ 20:17-19; ಮಾರ್ಕ 10:32-34) [PS] ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
ಲೂಕನು 18 : 32 (IRVKN)
ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
ಲೂಕನು 18 : 33 (IRVKN)
ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. [PE][PS]
ಲೂಕನು 18 : 34 (IRVKN)
ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ. [PS]
ಲೂಕನು 18 : 35 (IRVKN)
{ಯೇಸು ಒಬ್ಬ ಕುರುಡ ಭಿಕ್ಷುಕನನ್ನು ಸ್ವಸ್ಥಮಾಡಿದ್ದು} (ಮತ್ತಾ 20:29-34; ಮಾರ್ಕ 10:46-52) [PS] ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
ಲೂಕನು 18 : 36 (IRVKN)
ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
ಲೂಕನು 18 : 37 (IRVKN)
ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
ಲೂಕನು 18 : 38 (IRVKN)
ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
ಲೂಕನು 18 : 39 (IRVKN)
ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
ಲೂಕನು 18 : 40 (IRVKN)
ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
ಲೂಕನು 18 : 41 (IRVKN)
ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
ಲೂಕನು 18 : 42 (IRVKN)
ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
ಲೂಕನು 18 : 43 (IRVKN)
ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: