ಲೂಕನು 2 : 1 (IRVKN)
ಯೇಸು ಕ್ರಿಸ್ತನ ಜನನವೂ ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.
ಲೂಕನು 2 : 2 (IRVKN)
ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.
ಲೂಕನು 2 : 3 (IRVKN)
ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
ಲೂಕನು 2 : 4 (IRVKN)
(4-5)ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
ಲೂಕನು 2 : 5 (IRVKN)
ಲೂಕನು 2 : 6 (IRVKN)
ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.
ಲೂಕನು 2 : 7 (IRVKN)
ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.
ಲೂಕನು 2 : 8 (IRVKN)
ದೇವದೂತರು ಯೇಸುವಿನ ಜನನವನ್ನು ಕುರುಬರಿಗೆ ತಿಳಿಸಿದ್ದು ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,
ಲೂಕನು 2 : 9 (IRVKN)
ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.
ಲೂಕನು 2 : 10 (IRVKN)
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
ಲೂಕನು 2 : 11 (IRVKN)
ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
ಲೂಕನು 2 : 12 (IRVKN)
ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.
ಲೂಕನು 2 : 13 (IRVKN)
(13-14)ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
ಲೂಕನು 2 : 14 (IRVKN)
ಲೂಕನು 2 : 15 (IRVKN)
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
ಲೂಕನು 2 : 16 (IRVKN)
ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.
ಲೂಕನು 2 : 17 (IRVKN)
ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು.
ಲೂಕನು 2 : 18 (IRVKN)
ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.
ಲೂಕನು 2 : 19 (IRVKN)
ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
ಲೂಕನು 2 : 20 (IRVKN)
ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
ಲೂಕನು 2 : 21 (IRVKN)
ಯೇಸುವಿನ ನಾಮಕರಣ ಮತ್ತು ಆತನನ್ನು ದೇವಾಲಯದಲ್ಲಿ ದೇವರಿಗೆ ಸಮರ್ಪಿಸಿದ್ದು
ಲೂಕನು 2 : 22 (IRVKN)
ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು. (22-23)ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
ಲೂಕನು 2 : 23 (IRVKN)
ಲೂಕನು 2 : 24 (IRVKN)
ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
ಲೂಕನು 2 : 25 (IRVKN)
ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
ಲೂಕನು 2 : 26 (IRVKN)
ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
ಲೂಕನು 2 : 27 (IRVKN)
ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
ಲೂಕನು 2 : 28 (IRVKN)
ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ,
ಲೂಕನು 2 : 29 (IRVKN)
“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
ಲೂಕನು 2 : 30 (IRVKN)
(30-31)ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.
ಲೂಕನು 2 : 31 (IRVKN)
ಲೂಕನು 2 : 32 (IRVKN)
ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
ಲೂಕನು 2 : 33 (IRVKN)
ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,
ಲೂಕನು 2 : 34 (IRVKN)
ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
ಲೂಕನು 2 : 35 (IRVKN)
ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
ಲೂಕನು 2 : 36 (IRVKN)
ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
ಲೂಕನು 2 : 37 (IRVKN)
ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
ಲೂಕನು 2 : 38 (IRVKN)
ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
ಲೂಕನು 2 : 39 (IRVKN)
ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
ಲೂಕನು 2 : 40 (IRVKN)
ಲೂಕನು 2 : 41 (IRVKN)
ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು. ಬಾಲಕನಾದ ಯೇಸು ದೇವಾಲಯದಲ್ಲಿ ವಿದ್ವಾಂಸರೊಂದಿಗೆ ಸಂಭಾಷಿಸಿದ್ದು ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
ಲೂಕನು 2 : 42 (IRVKN)
ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.
ಲೂಕನು 2 : 43 (IRVKN)
ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,
ಲೂಕನು 2 : 44 (IRVKN)
ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
ಲೂಕನು 2 : 45 (IRVKN)
ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.
ಲೂಕನು 2 : 46 (IRVKN)
ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
ಲೂಕನು 2 : 47 (IRVKN)
ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.
ಲೂಕನು 2 : 48 (IRVKN)
ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
ಲೂಕನು 2 : 49 (IRVKN)
ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.
ಲೂಕನು 2 : 50 (IRVKN)
ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
ಲೂಕನು 2 : 51 (IRVKN)
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
ಲೂಕನು 2 : 52 (IRVKN)
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52