ಲೂಕನು 20 : 1 (IRVKN)
ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದ್ದು
ಮತ್ತಾ 21:23-27; ಮಾರ್ಕ 11:27-33 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
ಲೂಕನು 20 : 2 (IRVKN)
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
ಲೂಕನು 20 : 3 (IRVKN)
ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
ಲೂಕನು 20 : 4 (IRVKN)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
ಲೂಕನು 20 : 5 (IRVKN)
ಆಗ ಅವರು, “ ‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
ಲೂಕನು 20 : 6 (IRVKN)
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’ ” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
ಲೂಕನು 20 : 7 (IRVKN)
ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
ಲೂಕನು 20 : 8 (IRVKN)
ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
ಲೂಕನು 20 : 9 (IRVKN)
ದ್ರಾಕ್ಷಿಯ ತೋಟದ ಒಕ್ಕಲಿಗರ ಸಾಮ್ಯ
ಮತ್ತಾ 21:33-46; ಮಾರ್ಕ 12:1-12 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
ಲೂಕನು 20 : 10 (IRVKN)
ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಲೂಕನು 20 : 11 (IRVKN)
ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಲೂಕನು 20 : 12 (IRVKN)
ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
ಲೂಕನು 20 : 13 (IRVKN)
ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
ಲೂಕನು 20 : 14 (IRVKN)
ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
ಲೂಕನು 20 : 15 (IRVKN)
ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
ಲೂಕನು 20 : 16 (IRVKN)
ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
ಲೂಕನು 20 : 17 (IRVKN)
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
ಲೂಕನು 20 : 19 (IRVKN)
“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು. ಸುಂಕದ ಕುರಿತು ವಿರೋಧಿಗಳ ಪ್ರಶ್ನೆ
ಮತ್ತಾ 22:15-22; ಮಾರ್ಕ 12:13-17 ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
ಲೂಕನು 20 : 20 (IRVKN)
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
ಲೂಕನು 20 : 21 (IRVKN)
ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
ಲೂಕನು 20 : 22 (IRVKN)
ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
ಲೂಕನು 20 : 23 (IRVKN)
ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
ಲೂಕನು 20 : 24 (IRVKN)
ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
ಲೂಕನು 20 : 25 (IRVKN)
ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
ಲೂಕನು 20 : 26 (IRVKN)
ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
ಲೂಕನು 20 : 27 (IRVKN)
ಪುನರುತ್ಥಾನದ ಕುರಿತು ಸದ್ದುಕಾಯರ ಪ್ರಶ್ನೆ
ಮತ್ತಾ 22:23-33; ಮಾರ್ಕ 12:18-27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
ಲೂಕನು 20 : 28 (IRVKN)
“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
ಲೂಕನು 20 : 29 (IRVKN)
ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
ಲೂಕನು 20 : 30 (IRVKN)
(30-31)ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
ಲೂಕನು 20 : 32 (IRVKN)
ಕಡೆಯಲ್ಲಿ ಆ ಹೆಂಗಸೂ ಸತ್ತಳು.
ಲೂಕನು 20 : 33 (IRVKN)
ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
ಲೂಕನು 20 : 34 (IRVKN)
ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ.
ಲೂಕನು 20 : 35 (IRVKN)
ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.
ಲೂಕನು 20 : 36 (IRVKN)
ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
ಲೂಕನು 20 : 37 (IRVKN)
ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ* ವಿಮೋ 3:6 ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
ಲೂಕನು 20 : 38 (IRVKN)
ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
ಲೂಕನು 20 : 39 (IRVKN)
ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
ಲೂಕನು 20 : 40 (IRVKN)
ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
ಲೂಕನು 20 : 41 (IRVKN)
ಕ್ರಿಸ್ತನ ಕುರಿತಾದ ಪ್ರಶ್ನೆ
ಮತ್ತಾ 22:41-46; ಮಾರ್ಕ 12:35-37
ಲೂಕನು 20 : 42 (IRVKN)
ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? (42-43) † ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
ಲೂಕನು 20 : 45 (IRVKN)
“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು. ಶಾಸ್ತ್ರಿಗಳ ವಿಷಯದಲ್ಲಿ ಯೇಸು ಎಚ್ಚರಿಸಿದ್ದು
ಮತ್ತಾ 23:1-36; ಮಾರ್ಕ 12:38-40 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
ಲೂಕನು 20 : 46 (IRVKN)
“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
ಲೂಕನು 20 : 47 (IRVKN)
ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47