ಲೂಕನು 21 : 1 (IRVKN)
{ವಿಧವೆಯ ಕಾಣಿಕೆ} (ಮಾರ್ಕ 12:41-44) [PS] ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
ಲೂಕನು 21 : 2 (IRVKN)
ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
ಲೂಕನು 21 : 3 (IRVKN)
“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.
ಲೂಕನು 21 : 4 (IRVKN)
ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು. [PS]
ಲೂಕನು 21 : 5 (IRVKN)
{ಯೇಸು ಯೆರೂಸಲೇಮಿನ ದೇವಾಲಯದ ನಾಶನದ ಬಗ್ಗೆ ಹೇಳಿದ್ದು} (ಮತ್ತಾ 24:1-14; ಮಾರ್ಕ 13:1-13) [PS] ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
ಲೂಕನು 21 : 6 (IRVKN)
ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
ಲೂಕನು 21 : 7 (IRVKN)
ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,
ಲೂಕನು 21 : 8 (IRVKN)
ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
ಲೂಕನು 21 : 9 (IRVKN)
ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. [PE][PS]
ಲೂಕನು 21 : 10 (IRVKN)
ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
ಲೂಕನು 21 : 11 (IRVKN)
ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
ಲೂಕನು 21 : 12 (IRVKN)
ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
ಲೂಕನು 21 : 13 (IRVKN)
ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
ಲೂಕನು 21 : 14 (IRVKN)
ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.
ಲೂಕನು 21 : 15 (IRVKN)
ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
ಲೂಕನು 21 : 16 (IRVKN)
ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
ಲೂಕನು 21 : 17 (IRVKN)
ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
ಲೂಕನು 21 : 18 (IRVKN)
ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
ಲೂಕನು 21 : 19 (IRVKN)
ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ. [PS]
ಲೂಕನು 21 : 20 (IRVKN)
{ಯೆರೂಸಲೇಮಿನ ನಾಶನದ ಬಗ್ಗೆ ಯೇಸು ಹೇಳಿದ್ದು} (ಮತ್ತಾ 24:15-21; ಮಾರ್ಕ 13:14-19) [PS] “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
ಲೂಕನು 21 : 21 (IRVKN)
ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
ಲೂಕನು 21 : 22 (IRVKN)
ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
ಲೂಕನು 21 : 23 (IRVKN)
ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
ಲೂಕನು 21 : 24 (IRVKN)
ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. [PS]
ಲೂಕನು 21 : 25 (IRVKN)
{ಮನುಷ್ಯಕುಮಾರನು ಪುನರಾಗಮನ} (ಮತ್ತಾ 24:29-31; ಮಾರ್ಕ 13:24-27) [PS] “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
ಲೂಕನು 21 : 26 (IRVKN)
ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
ಲೂಕನು 21 : 27 (IRVKN)
ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
ಲೂಕನು 21 : 28 (IRVKN)
ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. [PS]
ಲೂಕನು 21 : 29 (IRVKN)
{ಅಂಜೂರ ಮರದ ಸಾಮ್ಯ} (ಮತ್ತಾ 24:32-35; ಮಾರ್ಕ 13:28-31) [PS] ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
ಲೂಕನು 21 : 30 (IRVKN)
ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.
ಲೂಕನು 21 : 31 (IRVKN)
ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. [PE][PS]
ಲೂಕನು 21 : 32 (IRVKN)
“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಲೂಕನು 21 : 33 (IRVKN)
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. [PE][PS]
ಲೂಕನು 21 : 34 (IRVKN)
“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
ಲೂಕನು 21 : 35 (IRVKN)
ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.
ಲೂಕನು 21 : 36 (IRVKN)
ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು. [PS]
ಲೂಕನು 21 : 37 (IRVKN)
{ಅಧಿಕಾರಿಗಳು ಯೇಸುವನ್ನು ಕೊಲ್ಲುವುದಕ್ಕೆ ಉಪಾಯಮಾಡಿದ್ದು} [PS] ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
ಲೂಕನು 21 : 38 (IRVKN)
ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: