ಲೂಕನು 22 : 1 (IRVKN)
ಯೇಸುವಿನ ಕೊಲೆಗೆ ಒಳಸಂಚು
ಮತ್ತಾ 26:1-5; ಮಾರ್ಕ 14:1,2; ಯೋಹಾ 11:45-53
ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,
ಲೂಕನು 22 : 2 (IRVKN)
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
ಲೂಕನು 22 : 3 (IRVKN)
ಯೂದನ ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು
ಮತ್ತಾ 26:14-16; ಮಾರ್ಕ 14:10,11
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
ಲೂಕನು 22 : 4 (IRVKN)
ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
ಲೂಕನು 22 : 5 (IRVKN)
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,
ಲೂಕನು 22 : 6 (IRVKN)
ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
ಲೂಕನು 22 : 7 (IRVKN)
ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು
ಮತ್ತಾ 26:17-30; ಮಾರ್ಕ 14:12-26; ಯೋಹಾ 13:21-30; 1ಕೊರಿ 11:23-25
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
ಲೂಕನು 22 : 8 (IRVKN)
ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
ಲೂಕನು 22 : 9 (IRVKN)
ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,
ಲೂಕನು 22 : 10 (IRVKN)
ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
ಲೂಕನು 22 : 11 (IRVKN)
ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
ಲೂಕನು 22 : 12 (IRVKN)
ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
ಲೂಕನು 22 : 13 (IRVKN)
ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
ಲೂಕನು 22 : 14 (IRVKN)
ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
ಲೂಕನು 22 : 15 (IRVKN)
ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
ಲೂಕನು 22 : 16 (IRVKN)
ಇನ್ನು ದೇವರ ರಾಜ್ಯದಲ್ಲಿ* ಲೂಕ 17:20-37 ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
ಲೂಕನು 22 : 17 (IRVKN)
ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
ಲೂಕನು 22 : 18 (IRVKN)
ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
ಲೂಕನು 22 : 19 (IRVKN)
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
ಲೂಕನು 22 : 20 (IRVKN)
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
ಲೂಕನು 22 : 21 (IRVKN)
“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
ಲೂಕನು 22 : 22 (IRVKN)
ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.
ಲೂಕನು 22 : 23 (IRVKN)
ಲೂಕನು 22 : 24 (IRVKN)
ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. ದೊಡ್ಡವನು ಯಾರು ಎಂಬ ಚರ್ಚೆ ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
ಲೂಕನು 22 : 25 (IRVKN)
ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
ಲೂಕನು 22 : 26 (IRVKN)
ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
ಲೂಕನು 22 : 27 (IRVKN)
ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
ಲೂಕನು 22 : 28 (IRVKN)
ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
ಲೂಕನು 22 : 29 (IRVKN)
ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;
ಲೂಕನು 22 : 30 (IRVKN)
ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
ಲೂಕನು 22 : 31 (IRVKN)
ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
ಮತ್ತಾ 26:31-35; ಮಾರ್ಕ 14:27-31; ಯೋಹಾ 13:36-38
“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
ಲೂಕನು 22 : 32 (IRVKN)
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
ಲೂಕನು 22 : 33 (IRVKN)
ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,
ಲೂಕನು 22 : 34 (IRVKN)
ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
ಲೂಕನು 22 : 35 (IRVKN)
ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಹಣದ ಚೀಲ, ಹೆಗಲು ಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
ಲೂಕನು 22 : 36 (IRVKN)
ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
ಲೂಕನು 22 : 37 (IRVKN)
ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
ಲೂಕನು 22 : 38 (IRVKN)
ಲೂಕನು 22 : 39 (IRVKN)
ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು. ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋಗಿ ಪ್ರಾರ್ಥಿಸಿದ್ದು
ಮತ್ತಾ 26:36-46; ಮಾರ್ಕ 14:32-42
ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
ಲೂಕನು 22 : 40 (IRVKN)
ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
ಲೂಕನು 22 : 41 (IRVKN)
ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
ಲೂಕನು 22 : 42 (IRVKN)
“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
ಲೂಕನು 22 : 43 (IRVKN)
ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
ಲೂಕನು 22 : 44 (IRVKN)
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
ಲೂಕನು 22 : 45 (IRVKN)
ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
ಲೂಕನು 22 : 46 (IRVKN)
ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
ಲೂಕನು 22 : 47 (IRVKN)
ಯೇಸುವಿನ ಬಂಧನ
ಮತ್ತಾ 26:47-56; ಮಾರ್ಕ 14:43-50; ಯೋಹಾ 18:3-11
ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
ಲೂಕನು 22 : 48 (IRVKN)
ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
ಲೂಕನು 22 : 49 (IRVKN)
ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
ಲೂಕನು 22 : 50 (IRVKN)
ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.
ಲೂಕನು 22 : 51 (IRVKN)
ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
ಲೂಕನು 22 : 52 (IRVKN)
ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
ಲೂಕನು 22 : 53 (IRVKN)
ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.
ಲೂಕನು 22 : 54 (IRVKN)
ಪೇತ್ರನು ಯೇಸುವನ್ನು ನಿರಾಕರಿಸಿದ್ದು
ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27
ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
ಲೂಕನು 22 : 55 (IRVKN)
ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
ಲೂಕನು 22 : 56 (IRVKN)
ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
ಲೂಕನು 22 : 57 (IRVKN)
ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.
ಲೂಕನು 22 : 58 (IRVKN)
ಲೂಕನು 22 : 59 (IRVKN)
ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
ಲೂಕನು 22 : 60 (IRVKN)
ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು. ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
ಲೂಕನು 22 : 61 (IRVKN)
ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
ಲೂಕನು 22 : 62 (IRVKN)
ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.
ಲೂಕನು 22 : 63 (IRVKN)
(63-64)ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
ಲೂಕನು 22 : 64 (IRVKN)
ಲೂಕನು 22 : 65 (IRVKN)
ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.
ಲೂಕನು 22 : 66 (IRVKN)
ಯೇಸುವನ್ನು ಹಿರೀಸಭೆಯವರ ನಿಲ್ಲಿಸಿದ್ದು
ಮತ್ತಾ 26:59-66; ಮಾರ್ಕ 14:55-64; ಯೋಹಾ 18:19-24
ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
ಲೂಕನು 22 : 67 (IRVKN)
“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
ಲೂಕನು 22 : 68 (IRVKN)
ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.
ಲೂಕನು 22 : 69 (IRVKN)
ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
ಲೂಕನು 22 : 70 (IRVKN)
ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
ಲೂಕನು 22 : 71 (IRVKN)
ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71