ಲೂಕನು 23 : 1 (IRVKN)
ಪಿಲಾತನು ಯೇಸುವನ್ನು ವಿಚಾರಿಸಿ ಮರಣದಂಡನೆಯನ್ನು ವಿಧಿಸಿದ್ದು
ಮತ್ತಾ 27:1,2,11-26; ಮಾರ್ಕ 15:1-15; ಯೋಹಾ 18:28-19:16
ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
ಲೂಕನು 23 : 2 (IRVKN)
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಲೂಕನು 23 : 3 (IRVKN)
ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
ಲೂಕನು 23 : 4 (IRVKN)
ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
ಲೂಕನು 23 : 5 (IRVKN)
ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
ಲೂಕನು 23 : 6 (IRVKN)
ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ,
ಲೂಕನು 23 : 7 (IRVKN)
ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
ಲೂಕನು 23 : 8 (IRVKN)
ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
ಲೂಕನು 23 : 9 (IRVKN)
ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.
ಲೂಕನು 23 : 10 (IRVKN)
ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.
ಲೂಕನು 23 : 11 (IRVKN)
ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
ಲೂಕನು 23 : 12 (IRVKN)
ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.
ಲೂಕನು 23 : 13 (IRVKN)
ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,
ಲೂಕನು 23 : 14 (IRVKN)
ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
ಲೂಕನು 23 : 15 (IRVKN)
ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
ಲೂಕನು 23 : 16 (IRVKN)
ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.
ಲೂಕನು 23 : 17 (IRVKN)
(* ಕೆಲವು ಪ್ರತಿಗಳಲ್ಲಿ ಇದು ಕಂಡುಬರುವುದಿಲ್ಲ. ಮಾರ್ಕ 15:6 ರನ್ನು ನೋಡಿರಿ. ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)
ಲೂಕನು 23 : 18 (IRVKN)
ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
ಲೂಕನು 23 : 19 (IRVKN)
ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
ಲೂಕನು 23 : 20 (IRVKN)
ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
ಲೂಕನು 23 : 21 (IRVKN)
ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.
ಲೂಕನು 23 : 22 (IRVKN)
ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
ಲೂಕನು 23 : 23 (IRVKN)
ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.
ಲೂಕನು 23 : 24 (IRVKN)
ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,
ಲೂಕನು 23 : 25 (IRVKN)
ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
ಲೂಕನು 23 : 26 (IRVKN)
ಯೇಸುವನ್ನು ಶಿಲುಬೆಗೆ ಹಾಕಿದ್ದು
ಮತ್ತಾ 27:32-44; ಮಾರ್ಕ 15:21-32; ಯೋಹಾ 19:17-27
ಲೂಕನು 23 : 27 (IRVKN)
ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು. ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
ಲೂಕನು 23 : 28 (IRVKN)
ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
ಲೂಕನು 23 : 29 (IRVKN)
ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.
ಲೂಕನು 23 : 30 (IRVKN)
ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
ಲೂಕನು 23 : 31 (IRVKN)
ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
ಲೂಕನು 23 : 32 (IRVKN)
ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
ಲೂಕನು 23 : 33 (IRVKN)
ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
ಲೂಕನು 23 : 34 (IRVKN)
ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
ಲೂಕನು 23 : 35 (IRVKN)
ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
ಲೂಕನು 23 : 36 (IRVKN)
ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,
ಲೂಕನು 23 : 37 (IRVKN)
“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.
ಲೂಕನು 23 : 38 (IRVKN)
ಲೂಕನು 23 : 39 (IRVKN)
ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
ಲೂಕನು 23 : 40 (IRVKN)
ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?
ಲೂಕನು 23 : 41 (IRVKN)
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
ಲೂಕನು 23 : 42 (IRVKN)
“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.
ಲೂಕನು 23 : 43 (IRVKN)
ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
ಲೂಕನು 23 : 44 (IRVKN)
ಯೇಸುವಿನ ಮರಣ
ಮತ್ತಾ 27:45-56; ಮಾರ್ಕ 15:33-41; ಯೋಹಾ 19:28-30
(44-45)ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
ಲೂಕನು 23 : 45 (IRVKN)
ಲೂಕನು 23 : 46 (IRVKN)
ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
ಲೂಕನು 23 : 47 (IRVKN)
ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
ಲೂಕನು 23 : 48 (IRVKN)
ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.
ಲೂಕನು 23 : 49 (IRVKN)
ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
ಲೂಕನು 23 : 50 (IRVKN)
ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು
ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42
(50-51)ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
ಲೂಕನು 23 : 51 (IRVKN)
ಲೂಕನು 23 : 52 (IRVKN)
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು,
ಲೂಕನು 23 : 53 (IRVKN)
ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
ಲೂಕನು 23 : 54 (IRVKN)
ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.
ಲೂಕನು 23 : 55 (IRVKN)
ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
ಲೂಕನು 23 : 56 (IRVKN)
ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56