ಲೂಕನು 4 : 1 (IRVKN)
ಯೇಸುವಿನ ಶೋಧನೆ
ಮತ್ತಾ 4:1-11; ಮಾರ್ಕ 1:12,13
ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
ಲೂಕನು 4 : 2 (IRVKN)
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
ಲೂಕನು 4 : 3 (IRVKN)
ಲೂಕನು 4 : 4 (IRVKN)
ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,
ಲೂಕನು 4 : 5 (IRVKN)
ಯೇಸು ಅವನಿಗೆ, “ ‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು. ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
ಲೂಕನು 4 : 6 (IRVKN)
“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
ಲೂಕನು 4 : 7 (IRVKN)
ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
ಲೂಕನು 4 : 8 (IRVKN)
ಲೂಕನು 4 : 9 (IRVKN)
ಅದಕ್ಕೆ ಯೇಸು, “ ‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು. ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
ಲೂಕನು 4 : 10 (IRVKN)
‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
ಲೂಕನು 4 : 11 (IRVKN)
ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
ಲೂಕನು 4 : 12 (IRVKN)
ಲೂಕನು 4 : 13 (IRVKN)
ಅದಕ್ಕೆ ಆತನು, “ ‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
ಲೂಕನು 4 : 14 (IRVKN)
ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು. ಯೇಸು ಗಲಿಲಾಯದಲ್ಲಿ ಉಪದೇಶಮಾಡಲು ಪ್ರಾರಂಭಿಸಿದ್ದು
ಮತ್ತಾ 4:12-17; ಮಾರ್ಕ 1:14,15
ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
ಲೂಕನು 4 : 15 (IRVKN)
ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
ಲೂಕನು 4 : 16 (IRVKN)
ನಜರೇತಿನಲ್ಲಿ ಯೇಸುವನ್ನು ನಿರಾಕರಿಸಿದ್ದು
ಮತ್ತಾ 13:53-58; ಮಾರ್ಕ 6:1-6
ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
ಲೂಕನು 4 : 17 (IRVKN)
ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
ಲೂಕನು 4 : 18 (IRVKN)
“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
ಲೂಕನು 4 : 19 (IRVKN)
ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
ಲೂಕನು 4 : 20 (IRVKN)
ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
ಲೂಕನು 4 : 21 (IRVKN)
ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
ಲೂಕನು 4 : 22 (IRVKN)
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
ಲೂಕನು 4 : 23 (IRVKN)
ಅದಕ್ಕೆ ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
ಲೂಕನು 4 : 24 (IRVKN)
ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಲೂಕನು 4 : 25 (IRVKN)
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
ಲೂಕನು 4 : 26 (IRVKN)
ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
ಲೂಕನು 4 : 27 (IRVKN)
ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
ಲೂಕನು 4 : 28 (IRVKN)
ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,
ಲೂಕನು 4 : 29 (IRVKN)
ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
ಲೂಕನು 4 : 30 (IRVKN)
ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
ಲೂಕನು 4 : 31 (IRVKN)
ಯೇಸು ದೆವ್ವಹಿಡಿದಿದ್ದ ಮನುಷ್ಯನನ್ನು ಬಿಡಿಸಿದ್ದು
ಮಾರ್ಕ 1:21-28
ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
ಲೂಕನು 4 : 32 (IRVKN)
ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
ಲೂಕನು 4 : 33 (IRVKN)
(33-34)ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.
ಲೂಕನು 4 : 34 (IRVKN)
ಲೂಕನು 4 : 35 (IRVKN)
ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
ಲೂಕನು 4 : 36 (IRVKN)
ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಲೂಕನು 4 : 37 (IRVKN)
ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.
ಲೂಕನು 4 : 38 (IRVKN)
ಯೇಸು ಅನೇಕ ಜನರನ್ನು ಸ್ವಸ್ಥಪಡಿಸಿದ್ದು
ಮತ್ತಾ 8:14-17; ಮಾರ್ಕ 1:29-34
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
ಲೂಕನು 4 : 39 (IRVKN)
ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
ಲೂಕನು 4 : 40 (IRVKN)
ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
ಲೂಕನು 4 : 41 (IRVKN)
ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
ಲೂಕನು 4 : 42 (IRVKN)
ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
ಲೂಕನು 4 : 43 (IRVKN)
ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
ಲೂಕನು 4 : 44 (IRVKN)
ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44