ಲೂಕನು 5 : 1 (IRVKN)
ಯೇಸು ಪ್ರಥಮ ಶಿಷ್ಯರನ್ನು ಆಯ್ಕೆ ಮಾಡಿಕೊಂಡದ್ದು ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
ಲೂಕನು 5 : 2 (IRVKN)
ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
ಲೂಕನು 5 : 3 (IRVKN)
ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
ಲೂಕನು 5 : 4 (IRVKN)
ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
ಲೂಕನು 5 : 5 (IRVKN)
ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
ಲೂಕನು 5 : 6 (IRVKN)
ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
ಲೂಕನು 5 : 7 (IRVKN)
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
ಲೂಕನು 5 : 8 (IRVKN)
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
ಲೂಕನು 5 : 9 (IRVKN)
ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
ಲೂಕನು 5 : 10 (IRVKN)
ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
ಲೂಕನು 5 : 11 (IRVKN)
ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
ಲೂಕನು 5 : 12 (IRVKN)
ಯೇಸು ಕುಷ್ಠರೋಗಿಯನ್ನು ವಾಸಿಮಾಡಿದ್ದು
ಮತ್ತಾ 8:1-4; ಮಾರ್ಕ 1:40-45 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
ಲೂಕನು 5 : 13 (IRVKN)
ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
ಲೂಕನು 5 : 14 (IRVKN)
ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
ಲೂಕನು 5 : 15 (IRVKN)
ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
ಲೂಕನು 5 : 16 (IRVKN)
ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
ಲೂಕನು 5 : 17 (IRVKN)
ಯೇಸು ಪಾರ್ಶ್ವವಾಯು ರೋಗಿಯನ್ನು ಗುಣಪಡಿಸಿದ್ದು
ಮತ್ತಾ 9:1-8; ಮಾರ್ಕ 2:1-12 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
ಲೂಕನು 5 : 18 (IRVKN)
ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
ಲೂಕನು 5 : 19 (IRVKN)
ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
ಲೂಕನು 5 : 20 (IRVKN)
ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.
ಲೂಕನು 5 : 22 (IRVKN)
ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
ಲೂಕನು 5 : 23 (IRVKN)
ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?
ಲೂಕನು 5 : 24 (IRVKN)
ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
ಲೂಕನು 5 : 25 (IRVKN)
ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
ಲೂಕನು 5 : 26 (IRVKN)
ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
ಲೂಕನು 5 : 27 (IRVKN)
ಯೇಸು ಲೇವಿಯನನ್ನು ಕರೆದದ್ದು
ಮತ್ತಾ 9:9-13; ಮಾರ್ಕ 2:13-17 ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
ಲೂಕನು 5 : 28 (IRVKN)
ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.
ಲೂಕನು 5 : 29 (IRVKN)
ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
ಲೂಕನು 5 : 30 (IRVKN)
ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
ಲೂಕನು 5 : 31 (IRVKN)
ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
ಲೂಕನು 5 : 32 (IRVKN)
ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
ಲೂಕನು 5 : 33 (IRVKN)
ಉಪವಾಸದ ಕುರಿತಾದ ವಿಚಾರಣೆ ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
ಲೂಕನು 5 : 34 (IRVKN)
ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
ಲೂಕನು 5 : 35 (IRVKN)
ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
ಲೂಕನು 5 : 36 (IRVKN)
ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
ಲೂಕನು 5 : 37 (IRVKN)
ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
ಲೂಕನು 5 : 38 (IRVKN)
ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
ಲೂಕನು 5 : 39 (IRVKN)
ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39