ಲೂಕನು 7 : 1 (IRVKN)
{ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು} (ಮತ್ತಾ 8:5-13) [PS] ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.
ಲೂಕನು 7 : 2 (IRVKN)
ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.
ಲೂಕನು 7 : 3 (IRVKN)
ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.
ಲೂಕನು 7 : 4 (IRVKN)
ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು,
ಲೂಕನು 7 : 5 (IRVKN)
ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,
ಲೂಕನು 7 : 6 (IRVKN)
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
ಲೂಕನು 7 : 7 (IRVKN)
ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
ಲೂಕನು 7 : 8 (IRVKN)
ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು. [PE][PS]
ಲೂಕನು 7 : 9 (IRVKN)
ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
ಲೂಕನು 7 : 10 (IRVKN)
ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು. [PS]
ಲೂಕನು 7 : 11 (IRVKN)
{ಯೇಸು ವಿಧವೆಯ ಮಗನನ್ನು ಬದುಕಿಸಿದ್ದು} [PS] ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.
ಲೂಕನು 7 : 12 (IRVKN)
ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.
ಲೂಕನು 7 : 13 (IRVKN)
ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,
ಲೂಕನು 7 : 14 (IRVKN)
ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
ಲೂಕನು 7 : 15 (IRVKN)
ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
ಲೂಕನು 7 : 16 (IRVKN)
ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
ಲೂಕನು 7 : 17 (IRVKN)
ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. [PS]
ಲೂಕನು 7 : 18 (IRVKN)
{ಸ್ನಾನಿಕನಾದ ಯೋಹಾನನು ಹೇಳಿಕಳುಹಿಸಿದ ಮಾತಿಗೆ ಯೇಸು ಉತ್ತರಕೊಟ್ಟದ್ದು} (ಮತ್ತಾ 11:2-19) [PS] ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು,
ಲೂಕನು 7 : 19 (IRVKN)
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. [PE][PS]
ಲೂಕನು 7 : 20 (IRVKN)
ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. [PE][PS]
ಲೂಕನು 7 : 21 (IRVKN)
ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.
ಲೂಕನು 7 : 22 (IRVKN)
ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
ಲೂಕನು 7 : 23 (IRVKN)
ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. [PE][PS]
ಲೂಕನು 7 : 24 (IRVKN)
ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
ಲೂಕನು 7 : 25 (IRVKN)
ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
ಲೂಕನು 7 : 26 (IRVKN)
ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.
ಲೂಕನು 7 : 27 (IRVKN)
‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.
ಲೂಕನು 7 : 28 (IRVKN)
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ. [PE][PS]
ಲೂಕನು 7 : 29 (IRVKN)
ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.
ಲೂಕನು 7 : 30 (IRVKN)
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು. [PE][PS]
ಲೂಕನು 7 : 31 (IRVKN)
ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?
ಲೂಕನು 7 : 32 (IRVKN)
ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.
ಲೂಕನು 7 : 33 (IRVKN)
ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.
ಲೂಕನು 7 : 34 (IRVKN)
ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.
ಲೂಕನು 7 : 35 (IRVKN)
ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು. [PS]
ಲೂಕನು 7 : 36 (IRVKN)
{ಯೇಸು ದುರಾಚಾರಿಣಿಯಾದ ಸ್ತ್ರೀಯನ್ನು ಕ್ಷಮಿಸಿದ್ದು} [PS] ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.
ಲೂಕನು 7 : 37 (IRVKN)
ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,
ಲೂಕನು 7 : 38 (IRVKN)
ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ಲೂಕನು 7 : 39 (IRVKN)
ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. [PE][PS]
ಲೂಕನು 7 : 40 (IRVKN)
ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.
ಲೂಕನು 7 : 41 (IRVKN)
ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು [* ದಿನಾರಿ ಅಥವಾ ಒಂದು ದಿನದ ಸಂಬಳ. ] ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.
ಲೂಕನು 7 : 42 (IRVKN)
ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,
ಲೂಕನು 7 : 43 (IRVKN)
ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,
ಲೂಕನು 7 : 44 (IRVKN)
ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.
ಲೂಕನು 7 : 45 (IRVKN)
ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.
ಲೂಕನು 7 : 46 (IRVKN)
ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.
ಲೂಕನು 7 : 47 (IRVKN)
ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.
ಲೂಕನು 7 : 48 (IRVKN)
ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
ಲೂಕನು 7 : 49 (IRVKN)
ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
ಲೂಕನು 7 : 50 (IRVKN)
ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50

BG:

Opacity:

Color:


Size:


Font: