ಲೂಕನು 9 : 1 (IRVKN)
{ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು} (ಮತ್ತಾ 10:5-14; ಮಾರ್ಕ 6:7-13) [PS] ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
ಲೂಕನು 9 : 2 (IRVKN)
ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
ಲೂಕನು 9 : 3 (IRVKN)
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
ಲೂಕನು 9 : 4 (IRVKN)
ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.
ಲೂಕನು 9 : 5 (IRVKN)
ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
ಲೂಕನು 9 : 6 (IRVKN)
ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು. [PS]
ಲೂಕನು 9 : 7 (IRVKN)
{ಹೆರೋದನ ಕಳವಳ} (ಮತ್ತಾ 14:1-12; ಮಾರ್ಕ 6:14-29) [PS] ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,
ಲೂಕನು 9 : 8 (IRVKN)
ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
ಲೂಕನು 9 : 9 (IRVKN)
ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. [PS]
ಲೂಕನು 9 : 10 (IRVKN)
{ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 14:13-21; ಮಾರ್ಕ 6:30-44; ಯೋಹಾ 6:1-14) [PS] ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
ಲೂಕನು 9 : 11 (IRVKN)
ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು. [PE][PS]
ಲೂಕನು 9 : 12 (IRVKN)
ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
ಲೂಕನು 9 : 13 (IRVKN)
ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
ಲೂಕನು 9 : 14 (IRVKN)
ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,
ಲೂಕನು 9 : 15 (IRVKN)
ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.
ಲೂಕನು 9 : 16 (IRVKN)
ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
ಲೂಕನು 9 : 17 (IRVKN)
ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. [PS]
ಲೂಕನು 9 : 18 (IRVKN)
{ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು} (ಮತ್ತಾ 16:13-19; ಮಾರ್ಕ 8:27-29) [PS] ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
ಲೂಕನು 9 : 19 (IRVKN)
ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
ಲೂಕನು 9 : 20 (IRVKN)
ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು. [PS]
ಲೂಕನು 9 : 21 (IRVKN)
{ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು} (ಮತ್ತಾ 16:20-28; ಮಾರ್ಕ 8:30-9:1) [PS] ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.
ಲೂಕನು 9 : 22 (IRVKN)
ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
ಲೂಕನು 9 : 23 (IRVKN)
ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಲೂಕನು 9 : 24 (IRVKN)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
ಲೂಕನು 9 : 25 (IRVKN)
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
ಲೂಕನು 9 : 26 (IRVKN)
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
ಲೂಕನು 9 : 27 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು. [PS]
ಲೂಕನು 9 : 28 (IRVKN)
{ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು} (ಮತ್ತಾ 17:1-8; ಮಾರ್ಕ 9:2-8) [PS] ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
ಲೂಕನು 9 : 29 (IRVKN)
ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
ಲೂಕನು 9 : 30 (IRVKN)
ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
ಲೂಕನು 9 : 31 (IRVKN)
ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
ಲೂಕನು 9 : 32 (IRVKN)
ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
ಲೂಕನು 9 : 33 (IRVKN)
ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
ಲೂಕನು 9 : 34 (IRVKN)
ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
ಲೂಕನು 9 : 35 (IRVKN)
ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
ಲೂಕನು 9 : 36 (IRVKN)
ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. [PS]
ಲೂಕನು 9 : 37 (IRVKN)
{ಯೇಸು ಮೂರ್ಛೆ ರೋಗಿಯನ್ನು ಸ್ವಸ್ಥಮಾಡಿದ್ದು} (ಮತ್ತಾ 17:14-18; ಮಾರ್ಕ 9:14-27) [PS] ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.
ಲೂಕನು 9 : 38 (IRVKN)
ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
ಲೂಕನು 9 : 39 (IRVKN)
ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
ಲೂಕನು 9 : 40 (IRVKN)
ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.
ಲೂಕನು 9 : 41 (IRVKN)
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
ಲೂಕನು 9 : 42 (IRVKN)
ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
ಲೂಕನು 9 : 43 (IRVKN)
ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಮತ್ತಾ 17:22,23; ಮಾರ್ಕ 9:30-32 [PE][PS] ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
ಲೂಕನು 9 : 44 (IRVKN)
{ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು} [PS] “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
ಲೂಕನು 9 : 45 (IRVKN)
ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. ದೊಡ್ಡವನು ಯಾರು? (ಮತ್ತಾ 18:1-5; ಮಾರ್ಕ 9:33-37) [PS]
ಲೂಕನು 9 : 46 (IRVKN)
ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.
ಲೂಕನು 9 : 47 (IRVKN)
ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,
ಲೂಕನು 9 : 48 (IRVKN)
ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು. [PS]
ಲೂಕನು 9 : 49 (IRVKN)
{ವಿರುದ್ಧವಲ್ಲದವರು ನಮ್ಮ ಪಕ್ಷದವರೇ} (ಮಾರ್ಕ 9:38-40) [PS] ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
ಲೂಕನು 9 : 50 (IRVKN)
ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು. [PS]
ಲೂಕನು 9 : 51 (IRVKN)
{ಸಮಾರ್ಯದವರು ಯೇಸುವನ್ನು ಸೇರಿಸಿಕೊಳ್ಳದೆ ಹೋದದ್ದು} [PS] ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
ಲೂಕನು 9 : 52 (IRVKN)
ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
ಲೂಕನು 9 : 53 (IRVKN)
ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
ಲೂಕನು 9 : 54 (IRVKN)
ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
ಲೂಕನು 9 : 55 (IRVKN)
ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು [* ಕೆಲವು ಪ್ರತಿಗಳಲ್ಲಿ ಹೀಗೆ ಬರೆಯಲ್ಪಟ್ಟಿದೆ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು.”] .
ಲೂಕನು 9 : 56 (IRVKN)
ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. [PS]
ಲೂಕನು 9 : 57 (IRVKN)
{ಯೇಸುವಿನ ಅನುಯಾಯಿಗಳು} (ಮತ್ತಾ 8:19-22) [PS] ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
ಲೂಕನು 9 : 58 (IRVKN)
ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. [PE][PS]
ಲೂಕನು 9 : 59 (IRVKN)
ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
ಲೂಕನು 9 : 60 (IRVKN)
ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು. [PE][PS]
ಲೂಕನು 9 : 61 (IRVKN)
ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
ಲೂಕನು 9 : 62 (IRVKN)
ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62

BG:

Opacity:

Color:


Size:


Font: