ಮಲಾಕಿಯ 1 : 1 (IRVKN)
ಸ್ವಜನರ ಮೇಲೆ ಯೆಹೋವನ ಪ್ರೀತಿ
ಮಲಾಕಿಯ 1 : 2 (IRVKN)
ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ. ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
ಮಲಾಕಿಯ 1 : 3 (IRVKN)
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ[* ದ್ವೇಷಿಸಿ ಅಥವಾ ತಿರಸ್ಕರಿಸಿ. ರೋಮಾ. 9: 13 ], ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
ಮಲಾಕಿಯ 1 : 4 (IRVKN)
ಹೀಗಿರಲು ಎದೋಮ್ಯರು† ಎದೋಮ್ಯರು ಏಸಾವನ ವಂಶದವರು. , “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
ಮಲಾಕಿಯ 1 : 5 (IRVKN)
ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’ ” ಅಂದುಕೊಳ್ಳುವಿರಿ.
ಮಲಾಕಿಯ 1 : 6 (IRVKN)
ಅಶುದ್ಧವಾದ ಯಜ್ಞಗಳು “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
ಮಲಾಕಿಯ 1 : 7 (IRVKN)
ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.
ಮಲಾಕಿಯ 1 : 8 (IRVKN)
ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
ಮಲಾಕಿಯ 1 : 9 (IRVKN)
“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಮಲಾಕಿಯ 1 : 10 (IRVKN)
“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಮಲಾಕಿಯ 1 : 11 (IRVKN)
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಮಲಾಕಿಯ 1 : 12 (IRVKN)
ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
ಮಲಾಕಿಯ 1 : 13 (IRVKN)
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
ಮಲಾಕಿಯ 1 : 14 (IRVKN)
“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
❮
❯
1
2
3
4
5
6
7
8
9
10
11
12
13
14