ಮಾರ್ಕನು 1 : 1 (IRVKN)
{ಸ್ನಾನಿಕನಾದ ಯೋಹಾನನು} (ಮತ್ತಾ 3:1-12; ಲೂಕ 3:1-18; ಯೋಹಾ 1:19-28) [PS] [* ಕೆಲವು ಪ್ರತಿಗಳಲ್ಲಿ ದೇವಕುಮಾರನಾದ ಎಂಬ ಪದವು ಇಲ್ಲ. ] ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು. [PE][PS]
ಮಾರ್ಕನು 1 : 2 (IRVKN)
[† ಮಲಾ. 3:1. ] ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, [QBR] “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; [QBR2] ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” [QBR]
ಮಾರ್ಕನು 1 : 3 (IRVKN)
[‡ ಯೆಶಾ 40:3.] “ ‘ಕರ್ತನ ದಾರಿಯನ್ನು ಸಿದ್ಧಮಾಡಿರಿ; [QBR2] ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ [QBR] ಎಂದು [§ ಮೂಲಭಾಷೆಯಲ್ಲಿ ಮರುಭೂಮಿಯೆಂದು ಉಪಯೋಗಿಸಲಾಗಿದೆ. ] ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
ಮಾರ್ಕನು 1 : 4 (IRVKN)
[* ಕೆಲವು ಪ್ರತಿಗಳಲ್ಲಿ, ಪ್ರವಾದಿಗಳ ಎಂದು ಬರೆದಿದೆ. ] ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
ಮಾರ್ಕನು 1 : 5 (IRVKN)
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
ಮಾರ್ಕನು 1 : 6 (IRVKN)
ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
ಮಾರ್ಕನು 1 : 7 (IRVKN)
ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
ಮಾರ್ಕನು 1 : 8 (IRVKN)
ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು. ಮತ್ತಾ 3:13-4:17; ಲೂಕ 3:21,22; 4:1-15; ಯೋಹಾ 1:31-33 [PE][PS]
ಮಾರ್ಕನು 1 : 9 (IRVKN)
{ಯೇಸುವಿನ ದೀಕ್ಷಾಸ್ನಾನ} [PS] ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
ಮಾರ್ಕನು 1 : 10 (IRVKN)
ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
ಮಾರ್ಕನು 1 : 11 (IRVKN)
ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು. [PE][PS]
ಮಾರ್ಕನು 1 : 12 (IRVKN)
ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು. [† ಮತ್ತಾ 4:1-11; ಲೂಕ 4:1-13.]
ಮಾರ್ಕನು 1 : 13 (IRVKN)
ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
ಮಾರ್ಕನು 1 : 14 (IRVKN)
[‡ ಯೋಹಾ 3:24.] ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
ಮಾರ್ಕನು 1 : 15 (IRVKN)
[§ ಮತ್ತಾ 4:17.] “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” [PS]
ಮಾರ್ಕನು 1 : 16 (IRVKN)
{ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು} (ಮತ್ತಾ 4:18-22; ಲೂಕ 5:1-11) [PS] ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
ಮಾರ್ಕನು 1 : 17 (IRVKN)
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
ಮಾರ್ಕನು 1 : 18 (IRVKN)
ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. [PE][PS]
ಮಾರ್ಕನು 1 : 19 (IRVKN)
ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
ಮಾರ್ಕನು 1 : 20 (IRVKN)
ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. [PS]
ಮಾರ್ಕನು 1 : 21 (IRVKN)
{ಯೇಸು ದೆವ್ವವನ್ನು ಬಿಡಿಸಿದ್ದು} (ಮತ್ತಾ 8:14-16; ಲೂಕ 4:31-41) [PS] ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
ಮಾರ್ಕನು 1 : 22 (IRVKN)
ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
ಮಾರ್ಕನು 1 : 23 (IRVKN)
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
ಮಾರ್ಕನು 1 : 24 (IRVKN)
ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
ಮಾರ್ಕನು 1 : 25 (IRVKN)
ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
ಮಾರ್ಕನು 1 : 26 (IRVKN)
ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
ಮಾರ್ಕನು 1 : 27 (IRVKN)
ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
ಮಾರ್ಕನು 1 : 28 (IRVKN)
ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು. [PS]
ಮಾರ್ಕನು 1 : 29 (IRVKN)
{ರೋಗಿಗಳನ್ನು ಸ್ವಸ್ಥಮಾಡಿದ್ದು} [PS] [* ಪಾಠಾಂತರ ಆ ಮೇಲೆ ಆತನು ಬಂದನು. ] ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
ಮಾರ್ಕನು 1 : 30 (IRVKN)
ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
ಮಾರ್ಕನು 1 : 31 (IRVKN)
ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. [PE][PS]
ಮಾರ್ಕನು 1 : 32 (IRVKN)
ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
ಮಾರ್ಕನು 1 : 33 (IRVKN)
ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
ಮಾರ್ಕನು 1 : 34 (IRVKN)
ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ. [PS]
ಮಾರ್ಕನು 1 : 35 (IRVKN)
{ಯೇಸುವಿನ ಏಕಾಂತ ಪ್ರಾರ್ಥನೆ} (ಲೂಕ 4:42-44) [PS] ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
ಮಾರ್ಕನು 1 : 36 (IRVKN)
ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
ಮಾರ್ಕನು 1 : 37 (IRVKN)
ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು. [PE][PS]
ಮಾರ್ಕನು 1 : 38 (IRVKN)
ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
ಮಾರ್ಕನು 1 : 39 (IRVKN)
ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. [PS]
ಮಾರ್ಕನು 1 : 40 (IRVKN)
{ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು} (ಮತ್ತಾ 8:2-4; ಲೂಕ 5:12-16) [PS] ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. [PE][PS]
ಮಾರ್ಕನು 1 : 41 (IRVKN)
ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
ಮಾರ್ಕನು 1 : 42 (IRVKN)
ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
ಮಾರ್ಕನು 1 : 43 (IRVKN)
ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
ಮಾರ್ಕನು 1 : 44 (IRVKN)
ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ [† ಯಾಜ 14:1-32.] ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
ಮಾರ್ಕನು 1 : 45 (IRVKN)
ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45

BG:

Opacity:

Color:


Size:


Font: