ಮಾರ್ಕನು 10 : 1 (IRVKN)
ವಿವಾಹ ವಿಚ್ಛೇದನ
ಮತ್ತಾ 19:1-9; ಲೂಕ 16:18
ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
ಮಾರ್ಕನು 10 : 2 (IRVKN)
ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
ಮಾರ್ಕನು 10 : 3 (IRVKN)
ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.
ಮಾರ್ಕನು 10 : 4 (IRVKN)
ಅದಕ್ಕೆ ಅವರು, [* ಧರ್ಮೋ 24: 1 ]“ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
ಮಾರ್ಕನು 10 : 5 (IRVKN)
ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.
ಮಾರ್ಕನು 10 : 6 (IRVKN)
ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಆದಿ 1:27: ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.
ಮಾರ್ಕನು 10 : 7 (IRVKN)
ಆದಿ 2:24: ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
ಮಾರ್ಕನು 10 : 8 (IRVKN)
ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
ಮಾರ್ಕನು 10 : 9 (IRVKN)
ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.
ಮಾರ್ಕನು 10 : 10 (IRVKN)
ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
ಮಾರ್ಕನು 10 : 11 (IRVKN)
ಅದಕ್ಕೆ ಆತನು, § ಮತ್ತಾ 5:32: “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
ಮಾರ್ಕನು 10 : 12 (IRVKN)
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
ಮಾರ್ಕನು 10 : 13 (IRVKN)
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಮತ್ತಾ 19:13-15; ಲೂಕ 18:15-17
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
ಮಾರ್ಕನು 10 : 14 (IRVKN)
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
ಮಾರ್ಕನು 10 : 15 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
ಮಾರ್ಕನು 10 : 16 (IRVKN)
ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಮಾರ್ಕನು 10 : 17 (IRVKN)
ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ
ಮತ್ತಾ 19:16-30; ಲೂಕ 18:18-30
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
ಮಾರ್ಕನು 10 : 18 (IRVKN)
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.
ಮಾರ್ಕನು 10 : 19 (IRVKN)
* ವಿಮೋ 20:12-16: ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
ಮಾರ್ಕನು 10 : 20 (IRVKN)
ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
ಮಾರ್ಕನು 10 : 21 (IRVKN)
ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಮಾರ್ಕನು 10 : 22 (IRVKN)
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
ಮಾರ್ಕನು 10 : 23 (IRVKN)
ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
ಮಾರ್ಕನು 10 : 24 (IRVKN)
ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28: ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
ಮಾರ್ಕನು 10 : 25 (IRVKN)
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.
ಮಾರ್ಕನು 10 : 26 (IRVKN)
ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
ಮಾರ್ಕನು 10 : 27 (IRVKN)
ಯೇಸು ಅವರನ್ನು ದೃಷ್ಟಿಸಿ ನೋಡಿ ಲೂಕ 1:37; ರೋಮಾ. 4:21: “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
ಮಾರ್ಕನು 10 : 28 (IRVKN)
ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
ಮಾರ್ಕನು 10 : 29 (IRVKN)
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
ಮಾರ್ಕನು 10 : 30 (IRVKN)
ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
ಮಾರ್ಕನು 10 : 31 (IRVKN)
ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
ಮಾರ್ಕನು 10 : 32 (IRVKN)
ಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದು
ಮತ್ತಾ 20:17-19; ಲೂಕ 18:31-34
ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
ಮಾರ್ಕನು 10 : 33 (IRVKN)
ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
ಮಾರ್ಕನು 10 : 34 (IRVKN)
ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ§ ಹೋಶೇ. 6:2: ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
ಮಾರ್ಕನು 10 : 35 (IRVKN)
ಜೆಬೆದಾಯನ ಮಕ್ಕಳ ಬಿನ್ನಹ
ಮತ್ತಾ 20:20-28
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
ಮಾರ್ಕನು 10 : 36 (IRVKN)
ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,
ಮಾರ್ಕನು 10 : 37 (IRVKN)
ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
ಮಾರ್ಕನು 10 : 38 (IRVKN)
ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.* ಯೋಹಾ 18:11: ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? [† ಲೂಕ 12: 50 ]ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
ಮಾರ್ಕನು 10 : 39 (IRVKN)
ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
ಮಾರ್ಕನು 10 : 40 (IRVKN)
ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
ಮಾರ್ಕನು 10 : 41 (IRVKN)
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
ಮಾರ್ಕನು 10 : 42 (IRVKN)
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
ಮಾರ್ಕನು 10 : 43 (IRVKN)
ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.
ಮಾರ್ಕನು 10 : 44 (IRVKN)
ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.
ಮಾರ್ಕನು 10 : 45 (IRVKN)
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ 1 ತಿಮೊ. 2:6: ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
ಮಾರ್ಕನು 10 : 46 (IRVKN)
ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
ಮತ್ತಾ 20:29-34; ಲೂಕ 18:35-43
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
ಮಾರ್ಕನು 10 : 47 (IRVKN)
ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
ಮಾರ್ಕನು 10 : 48 (IRVKN)
ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
ಮಾರ್ಕನು 10 : 49 (IRVKN)
ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
ಮಾರ್ಕನು 10 : 50 (IRVKN)
ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
ಮಾರ್ಕನು 10 : 51 (IRVKN)
ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
ಮಾರ್ಕನು 10 : 52 (IRVKN)
ಯೇಸು ಅವನಿಗೆ, “ಹೋಗು,§ ಮಾರ್ಕ 5:34; ಲೂಕ 7:50; 17:19; ಅ. ಕೃ. 14:9: ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52