ಮಾರ್ಕನು 11 : 1 (IRVKN)
{ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು} (ಮತ್ತಾ 21:1-9; ಲೂಕ 19:29-38; ಯೋಹಾ 12:12-16) [PS] ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
ಮಾರ್ಕನು 11 : 2 (IRVKN)
“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
ಮಾರ್ಕನು 11 : 3 (IRVKN)
ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
ಮಾರ್ಕನು 11 : 4 (IRVKN)
ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
ಮಾರ್ಕನು 11 : 5 (IRVKN)
ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.
ಮಾರ್ಕನು 11 : 6 (IRVKN)
ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
ಮಾರ್ಕನು 11 : 7 (IRVKN)
ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
ಮಾರ್ಕನು 11 : 8 (IRVKN)
ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
ಮಾರ್ಕನು 11 : 9 (IRVKN)
ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: [QBR] “ಹೊಸನ್ನ, [* ಕೀರ್ತ 118:25, 26:] ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; [QBR]
ಮಾರ್ಕನು 11 : 10 (IRVKN)
ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; [QBR] ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು. [PE][PS]
ಮಾರ್ಕನು 11 : 11 (IRVKN)
ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. [PS]
ಮಾರ್ಕನು 11 : 12 (IRVKN)
{ಯೇಸು ಅಂಜೂರದ ಮರವನ್ನು ಶಪಿಸಿದ್ದು} (ಮತ್ತಾ 21:12-22; ಲೂಕ 19:45-48) [PS] ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
ಮಾರ್ಕನು 11 : 13 (IRVKN)
ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
ಮಾರ್ಕನು 11 : 14 (IRVKN)
ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. [PS]
ಮಾರ್ಕನು 11 : 15 (IRVKN)
{ದೇವಾಲಯದ ಶುದ್ಧೀಕರಣ} [PS] [† ಯೋಹಾ 2:14-16:] ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
ಮಾರ್ಕನು 11 : 16 (IRVKN)
ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
ಮಾರ್ಕನು 11 : 17 (IRVKN)
ಮತ್ತು ಆತನು ಉಪದೇಶಮಾಡಿ, [QBR] [‡ ಯೆಶಾ 56:7:] “ ‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ [QBR2] ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? [QBR] ಆದರೆ [§ ಯೆರೆ 7:11:] ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’ ” ಎಂದು ಹೇಳಿದನು.
ಮಾರ್ಕನು 11 : 18 (IRVKN)
ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. [PE][PS]
ಮಾರ್ಕನು 11 : 19 (IRVKN)
ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. [PS]
ಮಾರ್ಕನು 11 : 20 (IRVKN)
{ನಿಸ್ಸಂದೇಹವಾದ ನಂಬಿಕೆ} [PS] ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
ಮಾರ್ಕನು 11 : 21 (IRVKN)
ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
ಮಾರ್ಕನು 11 : 22 (IRVKN)
ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
ಮಾರ್ಕನು 11 : 23 (IRVKN)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
ಮಾರ್ಕನು 11 : 24 (IRVKN)
ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಮಾರ್ಕನು 11 : 25 (IRVKN)
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
ಮಾರ್ಕನು 11 : 26 (IRVKN)
[* ಕೆಲವು ಪ್ರತಿಗಳಲ್ಲಿ 26 ನೆಯ ವಚನವಿಲ್ಲ. ಮತ್ತಾ 6:14, 15; 18:35:] ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. [PS]
ಮಾರ್ಕನು 11 : 27 (IRVKN)
{ಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದು} (ಮತ್ತಾ 21:23-46; ಲೂಕ 20:1-19) [PS] ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
ಮಾರ್ಕನು 11 : 28 (IRVKN)
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
ಮಾರ್ಕನು 11 : 29 (IRVKN)
ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
ಮಾರ್ಕನು 11 : 30 (IRVKN)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
ಮಾರ್ಕನು 11 : 31 (IRVKN)
ಆಗ ಅವರು, “ ‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
ಮಾರ್ಕನು 11 : 32 (IRVKN)
‘ಮನುಷ್ಯರಿಂದ ಬಂದಿತು’ ” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
ಮಾರ್ಕನು 11 : 33 (IRVKN)
ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: