ಮಾರ್ಕನು 12 : 1 (IRVKN)
ದ್ರಾಕ್ಷಿಯ ತೋಟದ ಸಾಮ್ಯ ಆಗ ಯೇಸು ಅವರೊಂದಿಗೆ [* ಮಾರ್ಕ 4: 2 ]ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಯೆಶಾ 5:1, 2 ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
ಮಾರ್ಕನು 12 : 2 (IRVKN)
ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
ಮಾರ್ಕನು 12 : 3 (IRVKN)
ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಮಾರ್ಕನು 12 : 4 (IRVKN)
ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
ಮಾರ್ಕನು 12 : 5 (IRVKN)
ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
ಮಾರ್ಕನು 12 : 6 (IRVKN)
ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
ಮಾರ್ಕನು 12 : 7 (IRVKN)
ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
ಮಾರ್ಕನು 12 : 8 (IRVKN)
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
ಮಾರ್ಕನು 12 : 9 (IRVKN)
ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
ಮಾರ್ಕನು 12 : 10 (IRVKN)
§ ಕೀರ್ತ 118:22, 23 “ ‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಮಾರ್ಕನು 12 : 11 (IRVKN)
ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’ ” ಎಂದನು.
ಮಾರ್ಕನು 12 : 12 (IRVKN)
ಮಾರ್ಕನು 12 : 13 (IRVKN)
ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು. ಕೈಸರನಿಗೆ ತೆರಿಗೆ ಕೊಡುವ ವಿಷಯ
ಮತ್ತಾ 22:15-46; ಲೂಕ 20:20-44
ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
ಮಾರ್ಕನು 12 : 14 (IRVKN)
ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. * ಅಂದರೆ, ರೋಮ್ ಸಾಮ್ರಾಜ್ಯದ ಚಕ್ರವರ್ತಿಗೆ. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
ಮಾರ್ಕನು 12 : 15 (IRVKN)
ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
ಮಾರ್ಕನು 12 : 16 (IRVKN)
ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
ಮಾರ್ಕನು 12 : 17 (IRVKN)
ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
ಮಾರ್ಕನು 12 : 18 (IRVKN)
ಪುನರುತ್ಥಾನದ ಕುರಿತಾದ ಪ್ರಶ್ನೆ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
ಮಾರ್ಕನು 12 : 19 (IRVKN)
ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, [† ಧರ್ಮೋ 25: 5 ]‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
ಮಾರ್ಕನು 12 : 20 (IRVKN)
“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
ಮಾರ್ಕನು 12 : 21 (IRVKN)
ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
ಮಾರ್ಕನು 12 : 22 (IRVKN)
ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
ಮಾರ್ಕನು 12 : 23 (IRVKN)
ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
ಮಾರ್ಕನು 12 : 24 (IRVKN)
ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
ಮಾರ್ಕನು 12 : 25 (IRVKN)
ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
ಮಾರ್ಕನು 12 : 26 (IRVKN)
ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ[‡ ವಿಮೋ 3: 6 ]‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
ಮಾರ್ಕನು 12 : 27 (IRVKN)
ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
ಮಾರ್ಕನು 12 : 28 (IRVKN)
ಮುಖ್ಯವಾದ ಆಜ್ಞೆ ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
ಮಾರ್ಕನು 12 : 29 (IRVKN)
ಅದಕ್ಕೆ ಯೇಸು, § ಧರ್ಮೋ 6:4, 5: “ ‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು * ಅಥವಾ: ಅದ್ವಿತೀಯನು. ಮೂಲ: ಒಬ್ಬನೇ ಕರ್ತನು. ಒಬ್ಬನೇ ದೇವರು.
ಮಾರ್ಕನು 12 : 30 (IRVKN)
ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
ಮಾರ್ಕನು 12 : 31 (IRVKN)
[† ಯಾಜ 19: 18 ]‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
ಮಾರ್ಕನು 12 : 32 (IRVKN)
ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, [‡ ಧರ್ಮೋ 4: 35 ]ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
ಮಾರ್ಕನು 12 : 33 (IRVKN)
ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ [§ 1 ಸಮು 15: 22 ]ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
ಮಾರ್ಕನು 12 : 34 (IRVKN)
ಮಾರ್ಕನು 12 : 35 (IRVKN)
ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. ದಾವೀದಕುಮಾರನ ಕುರಿತಾದ ಪ್ರಶ್ನೆ
ಮಾರ್ಕನು 12 : 36 (IRVKN)
ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? [* ಕೀರ್ತ 110: 1 ]“ ‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
ಮಾರ್ಕನು 12 : 37 (IRVKN)
37 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
ಮಾರ್ಕನು 12 : 38 (IRVKN)
ಯೇಸು ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆ ಹೇಳಿದ್ದು
ಮತ್ತಾ 23; ಲೂಕ 20:45-47
ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
ಮಾರ್ಕನು 12 : 39 (IRVKN)
ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
ಮಾರ್ಕನು 12 : 40 (IRVKN)
ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
ಮಾರ್ಕನು 12 : 41 (IRVKN)
ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ
ಲೂಕ 21:1-4
ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
ಮಾರ್ಕನು 12 : 42 (IRVKN)
ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
ಮಾರ್ಕನು 12 : 43 (IRVKN)
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಮಾರ್ಕನು 12 : 44 (IRVKN)
ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44