ಮಾರ್ಕನು 14 : 1 (IRVKN)
ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು
ಮತ್ತಾ 26:1-16; ಲೂಕ 22:1-6; ಯೋಹಾ 11:47-53; 12:1-8
ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
ಮಾರ್ಕನು 14 : 2 (IRVKN)
“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.
ಮಾರ್ಕನು 14 : 3 (IRVKN)
ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
ಮಾರ್ಕನು 14 : 4 (IRVKN)
ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?
ಮಾರ್ಕನು 14 : 5 (IRVKN)
ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.
ಮಾರ್ಕನು 14 : 6 (IRVKN)
ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
ಮಾರ್ಕನು 14 : 7 (IRVKN)
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
ಮಾರ್ಕನು 14 : 8 (IRVKN)
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
ಮಾರ್ಕನು 14 : 9 (IRVKN)
ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
ಮಾರ್ಕನು 14 : 10 (IRVKN)
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
ಮಾರ್ಕನು 14 : 11 (IRVKN)
ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
ಮಾರ್ಕನು 14 : 12 (IRVKN)
ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನವನ್ನು ಮಾಡಿದ್ದು
ಮತ್ತಾ 26:17-29; ಲೂಕ 22:7-23; ಯೋಹಾ 13:21-29
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
ಮಾರ್ಕನು 14 : 13 (IRVKN)
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
ಮಾರ್ಕನು 14 : 14 (IRVKN)
ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.
ಮಾರ್ಕನು 14 : 15 (IRVKN)
“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
ಮಾರ್ಕನು 14 : 16 (IRVKN)
ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
ಮಾರ್ಕನು 14 : 17 (IRVKN)
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
ಮಾರ್ಕನು 14 : 18 (IRVKN)
ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
ಮಾರ್ಕನು 14 : 19 (IRVKN)
ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.
ಮಾರ್ಕನು 14 : 20 (IRVKN)
ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
ಮಾರ್ಕನು 14 : 21 (IRVKN)
ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
ಮಾರ್ಕನು 14 : 22 (IRVKN)
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
ಮಾರ್ಕನು 14 : 23 (IRVKN)
ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
ಮಾರ್ಕನು 14 : 24 (IRVKN)
ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ* ಕೆಲವು ಪ್ರತಿಗಳಲ್ಲಿ, ಹೊಸ ಒಡಂಬಡಿಕೆಯ ರಕ್ತ ಎಂದು ಬರೆದಿದೆ. ವಿಮೋ 24:8; ಯೆರೆ 31:31; ಜೆಕ. 9:11: ಒಡಂಬಡಿಕೆಯ ರಕ್ತ.
ಮಾರ್ಕನು 14 : 25 (IRVKN)
ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
ಮಾರ್ಕನು 14 : 26 (IRVKN)
ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
ಮತ್ತಾ 26:30-36; ಲೂಕ 22:31-53; ಯೋಹಾ 13:36-38; 18:1-11
ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
ಮಾರ್ಕನು 14 : 27 (IRVKN)
ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “ ‘ನಾನು ಜೆಕ. 13:7: ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
ಮಾರ್ಕನು 14 : 28 (IRVKN)
28 ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
ಮಾರ್ಕನು 14 : 29 (IRVKN)
ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.
ಮಾರ್ಕನು 14 : 30 (IRVKN)
ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಮಾರ್ಕ 14:68,72: ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
ಮಾರ್ಕನು 14 : 31 (IRVKN)
ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
ಮಾರ್ಕನು 14 : 32 (IRVKN)
ಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
ಮಾರ್ಕನು 14 : 33 (IRVKN)
ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
ಮಾರ್ಕನು 14 : 34 (IRVKN)
ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
ಮಾರ್ಕನು 14 : 35 (IRVKN)
ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
ಮಾರ್ಕನು 14 : 36 (IRVKN)
“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
ಮಾರ್ಕನು 14 : 37 (IRVKN)
ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
ಮಾರ್ಕನು 14 : 38 (IRVKN)
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
ಮಾರ್ಕನು 14 : 39 (IRVKN)
ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.
ಮಾರ್ಕನು 14 : 40 (IRVKN)
ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
ಮಾರ್ಕನು 14 : 41 (IRVKN)
ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
ಮಾರ್ಕನು 14 : 42 (IRVKN)
ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
ಮಾರ್ಕನು 14 : 43 (IRVKN)
ಯೇಸುವಿನ ಬಂಧನ ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
ಮಾರ್ಕನು 14 : 44 (IRVKN)
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
ಮಾರ್ಕನು 14 : 45 (IRVKN)
ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಮಾರ್ಕನು 14 : 46 (IRVKN)
ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
ಮಾರ್ಕನು 14 : 47 (IRVKN)
ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
ಮಾರ್ಕನು 14 : 48 (IRVKN)
ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
ಮಾರ್ಕನು 14 : 49 (IRVKN)
ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
ಮಾರ್ಕನು 14 : 50 (IRVKN)
ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
ಮಾರ್ಕನು 14 : 51 (IRVKN)
ಆಗ ಯುವಕನೊಬ್ಬನು ಮೈಮೇಲೆ § ಹೊದಿಕೆ ಬಟ್ಟೆ. ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
ಮಾರ್ಕನು 14 : 52 (IRVKN)
ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
ಮಾರ್ಕನು 14 : 53 (IRVKN)
ಯೇಸು ಹಿರೀಸಭೆಯವರ ಮುಂದೆ
ಮತ್ತಾ 26:57-75; ಲೂಕ 22:54-71; ಯೋಹಾ 18:12-27
ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
ಮಾರ್ಕನು 14 : 54 (IRVKN)
ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
ಮಾರ್ಕನು 14 : 55 (IRVKN)
ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
ಮಾರ್ಕನು 14 : 56 (IRVKN)
ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
ಮಾರ್ಕನು 14 : 57 (IRVKN)
(57-58)ತರುವಾಯ ಕೆಲವರು ಎದ್ದು ನಿಂತು, “ ‘ಇವನು * ಮಾರ್ಕ 15:29; ಯೋಹಾ 2:19: ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
ಮಾರ್ಕನು 14 : 58 (IRVKN)
ಮಾರ್ಕನು 14 : 59 (IRVKN)
ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
ಮಾರ್ಕನು 14 : 60 (IRVKN)
ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
ಮಾರ್ಕನು 14 : 61 (IRVKN)
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
ಮಾರ್ಕನು 14 : 62 (IRVKN)
ಯೇಸುವು “ಹೌದು ನಾನೇ! “ಇದಲ್ಲದೆ[† ದಾನಿ. 3:13; ಕೀರ್ತ 110:1; ಮತ್ತಾ 24: 30 ]ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
ಮಾರ್ಕನು 14 : 63 (IRVKN)
ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?
ಮಾರ್ಕನು 14 : 64 (IRVKN)
ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
ಮಾರ್ಕನು 14 : 65 (IRVKN)
ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
ಮಾರ್ಕನು 14 : 66 (IRVKN)
ಪೇತ್ರನ ನಿರಾಕರಣೆ ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
ಮಾರ್ಕನು 14 : 67 (IRVKN)
ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.
ಮಾರ್ಕನು 14 : 68 (IRVKN)
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
ಮಾರ್ಕನು 14 : 69 (IRVKN)
ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
ಮಾರ್ಕನು 14 : 70 (IRVKN)
ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.
ಮಾರ್ಕನು 14 : 71 (IRVKN)
ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
ಮಾರ್ಕನು 14 : 72 (IRVKN)
ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72