ಮಾರ್ಕನು 16 : 1 (IRVKN)
{ಯೇಸುವಿನ ಪುನರುತ್ಥಾನ} (ಮತ್ತಾ 28:1-8; ಲೂಕ 24:1-10; ಯೋಹಾ 20:1) [PS] ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
ಮಾರ್ಕನು 16 : 2 (IRVKN)
ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. [PE][PS]
ಮಾರ್ಕನು 16 : 3 (IRVKN)
“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಮಾರ್ಕನು 16 : 4 (IRVKN)
ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
ಮಾರ್ಕನು 16 : 5 (IRVKN)
ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. [PE][PS]
ಮಾರ್ಕನು 16 : 6 (IRVKN)
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
ಮಾರ್ಕನು 16 : 7 (IRVKN)
ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. [PE][PS]
ಮಾರ್ಕನು 16 : 8 (IRVKN)
ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. [PE][PS]
ಮಾರ್ಕನು 16 : 9 (IRVKN)
[* ಯೋಹಾ 20:14-18:] ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
ಮಾರ್ಕನು 16 : 10 (IRVKN)
ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
ಮಾರ್ಕನು 16 : 11 (IRVKN)
“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. [PS]
ಮಾರ್ಕನು 16 : 12 (IRVKN)
{ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು} [PS] [† ಲೂಕ 24:13, 15] ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
ಮಾರ್ಕನು 16 : 13 (IRVKN)
ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. [PE][PS]
ಮಾರ್ಕನು 16 : 14 (IRVKN)
ಅನಂತರ [‡ ಯೋಹಾ 20:19:] ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
ಮಾರ್ಕನು 16 : 15 (IRVKN)
ಆ ಮೇಲೆ ಅವರಿಗೆ, [§ ಮತ್ತಾ 28:19:] “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
ಮಾರ್ಕನು 16 : 16 (IRVKN)
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. [PE][PS]
ಮಾರ್ಕನು 16 : 17 (IRVKN)
“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
ಮಾರ್ಕನು 16 : 18 (IRVKN)
ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. [PS]
ಮಾರ್ಕನು 16 : 19 (IRVKN)
{ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು} [PS] ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ [* ಲೂಕ 24:51; ಅ. ಕೃ. 1:9:] ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
ಮಾರ್ಕನು 16 : 20 (IRVKN)
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು [† ಇಬ್ರಿ. 2:3, 4:] ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ [‡ ಅ. ಕೃ. 5:12:] ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. [§ 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ. ] [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: